ಬಂಟ್ವಾಳ: ಕಾರುಣಿಕದ ಕ್ಷೇತ್ರವಾದ ಪಣೋಲಿಬೈಲ್ ಶ್ರೀ ಕಲ್ಲುರ್ಟಿ- ಕಲ್ಕುಡ ದೈವಸ್ಥಾನದಲ್ಲಿ ವಾರ್ಷಿಕ ಕೋಲವು ಸರ್ಕಾರದ ಮಾರ್ಗ ಸೂಚಿಯನ್ನು ಪಾಲಿಸಿ ಕೊಂಡು ಹಿಂದಿನ ಸಂಪ್ರದಾಯದಂತೆ ಬುಧವಾರ ರಾತ್ರಿ ನಡೆಯಿತು.
ದೈವಸ್ಥಾನದ ಆಡಳಿತಧಿಕಾರಿ, ಬಂಟ್ವಾಳ ತಹಶೀಲ್ದಾರ್ ರಶ್ಮಿ. ಎಸ್.ಆರ್ . ಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ಜಯಮ್ಮ ಸಹಿತ ಬಂಟ್ವಾಳ ಕೇಂದ್ರ ಸ್ಥಾನಿಯ ಉಪತಹಸೀಲ್ದಾರ್ ಅಣ್ಣು ನಾಯ್ಕ್ ಕಂದಾಯ ನಿರೀಕ್ಷಕರಾದ ರಾಮ ಕಾಟಿಪಳ್ಳ. ನವೀನ್ ಬೆಂಜನಪದವು,ಅದೇ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಸ್ವಾತಿ ಹಾಗೂ ಬಂಟ್ವಾಳ ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು. ದೈವಸ್ಥಾನದ ಅರ್ಚಕ ವರ್ಗ ಹಾಗೂ ಸಿಬ್ಬಂದಿಗಳು ಭಕ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

