ಬಂಟ್ವಾಳ: ದೇಶದಲ್ಲಿ ಕೇಂದ್ರ ಸರ್ಕಾರವು ರೈತ ಮತ್ತು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಇಲ್ಲಿನ ಕಾರ್ಮಿಕ ಸಂಘಟನೆಗಳ ಒಕ್ಕೂಟದ ವತಿಯಿಂದ ಬಿ.ಸಿ.ರೋಡು ಮಿನಿ ವಿಧಾನಸೌಧ ಎದುರು ಗುರುವಾರ ಪ್ರತಿಭಟನೆ ನಡೆಯಿತು.ಕಾರ್ಮಿಕ ಮುಖಂಡ ಬಾಲಕೃಷ್ಣ ಶೆಟ್ಟಿ ಮಾತನಾಡಿ, ಕೇಂದ್ರ ಸರ್ಕಾರ ಏಕಪಕ್ಷೀಯವಾಗಿ ರೈತ, ಕಾರ್ಮಿ ಕ ವಿರೋದಿ ಕಾಯ್ದೆ ರೂಪಿಸಿ ಬಂಡವಾಳ ಶಾಹಿಗಳ ಪರವಾಗಿ ವರ್ತಿಸುತ್ತಿದೆ ಎಂದು ಆರೋಪಿಸಿದರು.IMG-20201126-WA0022
ಪ್ರಮುಖರಾದ ಸುರೇಶ್ ಕುಮಾರ್, ರಾಮಣ್ಣ ವಿಟ್ಲ, ತುಳಸೀದಾಸ್ ವಿಟ್ಲ, ಬಿ.ಶೇಖರ್, ಭಾರತಿ ಪ್ರಶಾಂತ್ ಮಾತನಾಡಿದರು. ಜೆಡಿಎಸ್ ಮುಖಂಡ ಹಾರೂನ್ ರಶೀದ್ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *