ಬಂಟ್ವಾಳ:ಇಲ್ಲಿನ ಬಿ.ಸಿ.ರೋಡು ಮಿನಿ ವಿಧಾನಸೌಧದಲ್ಲಿ ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರು ಮತ್ತು ದಲ್ಲಾಳಿಗಳು ತುಂಬಿಕೊಂಡಿದ್ದು, ಜನಸಾಮಾನ್ಯರನ್ನು ಅಲೆದಾಡಿಸುತ್ತಿದ್ದಾರೆ. ಪ್ರತಿಯೊಂದು ಕಡತ ವಿಲೇವಾರಿಗೂ ಇಲ್ಲಿನ ಕೆಲವೊಂದು ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಲಂಚ ಕೇಳುತ್ತಿದ್ದಾರೆ ಎಂಬ ಆರೋಪದ ನಡುವೆಯೇ ಎಸಿಬಿ ಅಧಿಕಾರಿಗಳ ತಂಡ ಗುರುವಾರ ಮಧ್ಯಾಹ್ನ ದಿಧೀರ್ ದಾಳಿ ನಡೆಸಿದ್ದಾರೆ.

ಇಲ್ಲಿನ ಉಪ ತಹಶೀಲ್ದಾರ್ ವ್ಯಕ್ತಿಯೊಬ್ಬರಿಗೆ ಆರ್ ಆರ್ ಟಿ ಕಡತ ವಿಲೇವಾರಿಗೊಳಿಸಲು ಹಣದ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಎಬಿಸಿ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಎಸಿಬಿ ಅಧಿಕಾರಿಗಳು ಬುಧವಾರ ಸಂಜೆ ತನಕ ಇಲ್ಲಿನ ಹಲವು ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ವಿಚಾರಣೆ ನಡೆಸಿದ ಬಳಿಕ ಉಪ ತಹಶೀಲ್ದಾರ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಾಲ್ಲೂಕು ಕಚೇರಿ ಮೂಲಗಳು ತಿಳಿಸಿದೆ.

By suddi9

Leave a Reply

Your email address will not be published. Required fields are marked *