Published On: Tue, Dec 1st, 2020

ಹಸ್ತ ಶಿಲ್ಪಿಯವರ “ಸಿಲ್ಕ್ ಇಂಡಿಯಾ 2020″ ಈಗ ನಮ್ಮ ಮಂಗಳೂರಿನ ಹೋಟೆಲ್ ಮೋತಿ ಮಹಲ್

 ಮೈಸೂರು:   ಭಾರತವು ರೇಷ್ಮೆ ಉತ್ಪಾದನೆಯಲ್ಲಿ ಪ್ರಪಂಚದಲ್ಲಿಯೇ ಮುಂಚೂಣಿಯಲ್ಲಿದ್ದು, ಭಾರತದಲ್ಲಿ ಉತ್ಪಾದನೆಯಾಗುವ ರೇಷ್ಮೆಗೆ ರಾಷ್ಟಿçÃಯ ಮತ್ತು ಅಂತರಾಷ್ಟಿçÃಯ ಮಾರುಕಟ್ಟೆಯಲ್ಲಿ ಬಹಳ ಬೇಡಿಕೆಯಿರುತ್ತದೆ. ದೇಶದಲ್ಲಿ ವಾಯುಗುಣ ಮತ್ತು ನಿಸರ್ಗಕ್ಕೆ ಅನುಗುಣವಾಗಿ ೪ ವಿವಿಧ ಪ್ರಭೇದದ ರೇಷ್ಮೆಗಳಿದ್ದು ಅವುಗಳಲ್ಲಿ ತಸ್ಸರ್, ಎರಿ, ಮುಲ್‌ಬಾರಿ ಮತ್ತು ಮುಗಾ ರೇಷ್ಮೆಯ ಪ್ರಮುಖವಾಗಿದ್ದು, ಇದರಲ್ಲಿ ತಸ್ಸರ್ ಮತ್ತು ಮುಗಾ ರೇಷ್ಮೆಯು ಒಂದು ನೈಜವಾದ ಹಾಗೂ ಉಷ್ಣವಲಯದಲ್ಲಿ ಬೆಳೆಯುವ ವನ್ಯ ರೇಷ್ಮೆ ಹಾಗೂ ಸಾವಯವ (ಆರ್ಗಾನಿಕ್) ರೇಷ್ಮೆಯಾಗಿದೆ. ತಸ್ಸರ್ ಮತ್ತು ಮುಗಾ ರೇಷ್ಮೆ ಉತ್ಪಾದನೆಯಲ್ಲಿ ಅಸ್ಸಾಂ, ಬಿಹಾರ್ ಮತ್ತು ಛತ್ತಿಸ್‌ಗಡ್ ರಾಜ್ಯಗಳು ದೇಶದಲ್ಲಿ ಪ್ರಮುಖವಾಗಿದೆ.

SILK INDIA 3

‘ಹಸ್ತಶಿಲ್ಪಿ’ ಸಂಸ್ಥೆಯನ್ನು ಭಾರತದಲ್ಲಿರುವ ಕುಶಲಕರ್ಮಿಗಳು ಮತ್ತು ನೇಕಾರರ ಶ್ರೋಯೋಭಿವೃದ್ಧಿಗಾಗಿ ಮೈಸೂರಿನಲ್ಲಿ ಸ್ಥಾಪಿಸಲಾಗಿದೆ. ನೇಕಾರರು ಮತ್ತು ಕುಶಲಕರ್ಮಿಗಳು ಉತ್ಪಾದಿಸುವ ಉತ್ಪನ್ನಗಳಿಗೆ ದೇಶದ ಮುಖ್ಯ ನಗರಗಳಲ್ಲಿ ಮಾರಾಟ ಮೇಳವನ್ನು ಆಯೋಜಿಸುವ ಮೂಲಕ ನೇರವಾಗಿ ಅವರ ಉತ್ಪನ್ನಗಳು ಗ್ರಾಹಕರಿಗೆ ತಲುಪಿಸುವಂತೆ ವ್ಯವಸ್ಥೆ ಮಾಡುವುದು ಮತ್ತು ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇಕಾರರೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಿ ಲಾಭವನ್ನು ಹೆಚ್ಚು ಗಳಿಸುವಂತೆ ಮಾಡುವ ಉದ್ದೇಶವನ್ನು ಸಂಸ್ಥೆಯು ಹೊಂದಿದೆ.SILK INDIA 10

ಅದರಂತೆ ಮಂಗಳೂರಿನಲ್ಲಿ ಮದುವೆ ಮತ್ತು ಕ್ರೀಸ್ಮಸ್ ಹಬ್ಬವನ್ನು ಗಮನದಲ್ಲಿಟ್ಟುಕೊಂಡು “ಸಿಲ್ಕ್ ಇಂಡಿಯ-೨೦೨೦” ಮೇಳವನ್ನು ದಿನಾಂಕ ೦೪.೧೨.೨೦೨೦ ರಿಂದ ೧೩.೧೨.೨೦೨೦ ವರೆಗೆ ೧೦ ದಿವಸಗಳ ಕಾಲ ‘ಹೋಟೆಲ್ ಮೋತಿ ಮಹಲ್, ಫಳ್ನಿರ್ ರಸ್ತೆ, ಮಂಗಳೂರು ರÀಲ್ಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಮೇಳದಲ್ಲಿ ಕಾಶ್ಮೀರದಿಂದ ಕಾಂಚಿಪುರAವರೆಗಿನ ರೇಷ್ಮೆ ಸೀರೆ ಉತ್ಪಾದಕರು, ರೇಷ್ಮೆ ಸೀರೆ ವಿನ್ಯಾಸಗಾರರು ಮತ್ತು ರೇಷ್ಮೆ ಸಹಕಾರ ಸಂಘಗಳು ೬೦ ಕ್ಕೂ ಹೆಚ್ಚಿನ ಮಳಿಗೆಗಳಲ್ಲಿ ತಮ್ಮ ರಾಜ್ಯದ ಸಾಂಪ್ರದಾಯಿಕ ರೇಷ್ಮೆ ಸೀರೆ ಮತ್ತು ಉತ್ಪನ್ನಗಳನ್ನು ಮಂಗಳೂರಿನ ಜನತೆಯ ಮುಂದೆ ಪ್ರತಿದಿನ ಬೆಳಿಗ್ಗೆ ೧೦.೩೦ ರಿಂದ ರಾತ್ರಿ ೮.೩೦ ರವರೆಗೆ ಪ್ರದರ್ಶಿಸಿ ಮಾರಾಟ ಮಾಡುವರು.

SILK INDIA 9

ಮೇಳದಲ್ಲಿ ತಸ್ಸರ್ ರೇಷ್ಮೆ ಸೀರೆಗಳು, ಕ್ರೇಪ್, ಶಿಫಾನ್ ಮತ್ತು ಜಾರ್ಜೆಟ್ ಸಿಲ್ಕ್ ಸೀರೆಗಳು, ಮೈಸೂರು ರೇಷ್ಮೆ ಸೀರೆಗಳು, ಧರ್ಮಾವರಂ ಸೀರೆಗಳು, ಕಾಂಚಿಪುರA ಸಿಲ್ಕ್ ಮತ್ತು ಮದುವೆ ಸೀರೆಗಳು, ರಾ ಸಿಲ್ಕ್ ಮತ್ತು ಕೋಸಾ ಸೀರೆಗಳು, ಕಲ್ಕೊತ್ತಾ ಗಣಪತಿ ಸೀರೆಗಳು, ಢಾಕ ಸೀರೆಗಳು, ಡಿಸೈನರ್ ಎಂಬ್ರಾಯಿಡರಿ ಸೀರೆ ಮತ್ತು ಡ್ರೆಸ್, ಬಲ್‌ಚೂರಿ ರೇಷ್ಮೆ, ಮಟ್ಕಾ ಸೀರೆಗಳು, ಪ್ರೀಂಟೆಡ್ ಸೀರೆಗಳು, ಪಶ್ಮೀನಾ ಸೀರೆಗಳು, ಡಿಸೈನರ್ ಡ್ರೆಸ್ ಮೇಟಿರಿಯಲ್ಸ್ಗಳು ಮತ್ತು ಸೀರೆಗಳು, ಬಾಗಲ್‌ಪುರ್ ರೇಷ್ಮೆ ಸೀರೆ ಮತ್ತು ಡ್ರೆಸ್, ಉಪ್ಪಡಾ ಮತ್ತು ಗೊಡ್ವಾಲ್ ಸೀರೆಗಳು, ಮಹೇಶ್ವರಿ ಮತ್ತು ಕೋಟಾ ಸಿಲ್ಕ್, ಟೆಂಪಲ್ ಬಾರ್ಡಾರ್‌ಉಳ್ಳ ಮುಲ್‌ಬಾರಿ ಸಿಲ್ಕ್, ಕಲ್ಕೋತ್ತಾ ರೇಷ್ಮೆ ಸೀರೆಗಳು, ಬನಾರಸ್ ಮತ್ತು ಜಮ್‌ದಾನಿ ರೇಷ್ಮೆ, ಶಿಫಾನ್ ಸೀರೆಗಳು, ಬುಟ್ಟಿ ಸೀರೆಗಳು, ಚಂದೇರಿ ಸಿಲ್ಕ್ ಮತ್ತು ಕೈ ಅಚ್ಚಿನ ಸೀರೆಗಳು ಪ್ರದರ್ಶನಗೊಳ್ಳಲಿದೆ.

silk india 8

ಇದಲ್ಲದೆ ಕುರ್ತಾ, ಸ್ಟೋಲ್ಸ್, ಶಾಲುಗಳು, ಸಲ್‌ವಾರ್ ಕಮೀಜ್ ಮತ್ತು ಉಡುಪಿನ ಬಟ್ಟೆಗಳು, ಕುಶನ್ ಕವರ್‌ಗಳು ಮತ್ತು ಬೆಡ್‌ಶೀಟ್‌ಗಳನ್ನು ಈ ವಸ್ತು ಪ್ರದರ್ಶನದಲ್ಲಿ ಪ್ರದರ್ಶಿಸಿ ಮಾರಾಟ ಮಾಡುವರು. ಈ ವಸ್ತುಗಳನ್ನು ಉತ್ವಾದಕರೆ ನೇರವಾಗಿ ಗ್ರಾಹಕರಿಗೆ ತಲುಪಿಸುತ್ತಿರುವುದರಿಂದ ವಸ್ತುಗಳು ನ್ಯಾಯಯುತ ಬೆಲೆಯಲ್ಲ್ಲಿ ದೊರಕುತ್ತದೆ.

SILK INDIA 6

ಆದುದರಿಂದ ಮಂಗಳೂರಿಗೆ ಭೇಟಿ ನೀಡುವ ಪ್ರವಾಸಿಗರು ಹಾಗೂ ಮಂಗಳೂರು ನಗರ ಹಾಗೂ ಸುತ್ತಮುತ್ತಲಿನ ಸಾರ್ವಜನಿಕರು ೧೦ ದಿವಸಗಳ ಈ ವಿಶಿಷ್ಟ ಸಿಲ್ಕ್ ಇಂಡಿಯಾ ಮೇಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿ ಉತ್ಪಾದಕರನ್ನು ಪ್ರೋತ್ಸಾಹಿಸಬೇಕೆಂದು ಈ ಮೂಲಕ ಕೋರಲಾಗಿದೆ. ಮೇಳಕ್ಕೆ ಪ್ರವೇಶವನ್ನು ಉಚಿತವಾಗಿ ಕಲ್ಪಿಸಲಾಗಿದೆ.SILK INDIA 5

ಸ್ಥಳ: ಹೋಟೆಲ್ ಮೋತಿ ಮಹಲ್, ಫಳ್ನೀರ್ ರಸ್ತ್ತೆ, ಮಂಗಳೂರು. ದೂರವಾಣಿ: ೮೬೬೦೭೧೪೨೫೨. ೮೦೭೩೯೬೨೧೦೩

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter