ಶ್ರೀನಿವಾಸಪುರ: ಕರ್ನಾಟಕ ಪ್ರಾಂತ ರೈತ ಸಂಘದ ಸದಸ್ಯರು ಕೇಂದ್ರ ಸರ್ಕಾರದ ಕಾರ್ಪೊರೇಟ್ ಪರ ನಿಲುವು ವಿರೋಧಿಸಿ ಪ್ರಧಾನಿ ಮೋದಿ, ಉದ್ದಿಮೆದಾರ ಮುಖೇಶ್ ಅಂಬಾನಿ ಹಾಗೂ ಅದಾನಿ ಅವರ ಪ್ರತಿಕೃತಿ ದಹಿಸಿದರು.
ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಪ್ರತಿಭಟನ ನಿರತ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಕೇಂದ್ರ ಸರ್ಕಾರ ಕಾರ್ಪೊರೇಟ್ ವಲಯದ ಕೈಗೊಂಬೆಯಾಗಿದೆ. ರೈತರ ಹಿತ ಬಲಿಗೊಟ್ಟು ಕಾರ್ಪೊರೇಟ್ ವಲಯದ ಹಿತ ಕಾಯುತ್ತಿದೆ ಎಂದು ಆಪಾದಿಸಿದರು.
ಕೃಷಿಕರು, ಕೃಷಿ ಕಾರ್ಮಿಕರು ಹಾಗೂ ಕಾರ್ಮಿಕರು ಕಷ್ಟದ ಜೀವನ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ರೈತ ಹಾಗೂ ಕಾರ್ಮಿಕ ವಿರೋಧಿ ನಿಲುವು ಹೊಂದಿದೆ. ವಿನಾಕಾರಣ ವಿವಿಧ ಕಾಯ್ದೆಗಳನ್ನು ತಿದ್ದುಪಡಿ ಮಾಡುವುದರ ಮೂಲಕ ಈ ವಲಯವನ್ನು ನಿಕೃಷ್ಟವಾಗಿ ಕಾಣುತ್ತಿದೆ. ಆದರೆ ಕಾರ್ಪೊರೇಟ್ ವಲಯಕ್ಕೆ ಕೆಂಪು ಹಾಸಿದೆ ಎಂದು ಹೇಳಿದರು.ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಪಾತಕೋಟ ನವೀನ್ ಕುಮಾರ್, ಮುಖಂಡರಾದ ಎನ್. ವೀರಪ್ಪರೆಡ್ಡಿ, ಮೂರ್ತಿ, ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರರು ಇದ್ದರು.
