ಮೂಡುಬಿದಿರೆ: ಕೋಟಿ ಚೆನ್ನಯರೆಂದರೆ ಕೇವಲ ದೈವಿಕ ಶಕ್ತಿ ಅಲ್ಲ. ಅವರು ತುಳುನಾಡಿನ ಸಂಸ್ಕೃತಿಯ ಪ್ರತಿಬಿಂಬ, ತ್ಯಾಗ ಬಲಿದಾನದ ಸಂಕೇತವಾಗಿದ್ದಾರೆ. ತುಳುನಾಡು ಮಾತ್ರವಲ್ಲದೆ ಮಡಿಕೇರಿ, ಕಾಸರಗೋಡಿನಲ್ಲು ಗರಡಿಗಳನ್ನು ಸ್ಥಾಪಿಸಿ ಸಾಮರಸ್ಯ ಮೆರೆದಿದ್ದಾರೆ.3b3fb078-c3f6-43d4-b798-37aba65c25ca

ಆದ್ದರಿಂದ ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳು ನಾಡಿನ ವೀರಪುರುಷರಾದ ಕೋಟಿ ಚೆನ್ನಯರ ಹೆಸರಿಡಬೇಕೆಂಬ ಜನಾಭಿಪ್ರಾಯಕ್ಕೆ ನನ್ನ ಬೆಂಬಲ ಇದೆ ಎಂದು ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ವಿಷಯದಲ್ಲಿ ಜನಾಭಿಪ್ರಾಯಕ್ಕೆ ಸ್ಪಂದಿಸಿ ನಾನು ಸೇರಿದಂತೆ ಜಿಲ್ಲೆಯ ಶಾಸಕರು, ಉಸ್ತುವಾರಿ ಸಚಿವರು ಹಾಗೂ ಸಂಸದರು ಸೇರಿ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಅದನ್ನು ಸಚಿವ ಸಂಪುಟಕ್ಕಿಟ್ಟು ಅನುಮೋದನೆ ಪಡೆದ ಬಳಿಕ ಮುಂದಿನ ಕ್ರಮಕ್ಕಾಗಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಕಳಿಸಲಾಗುತ್ತದೆ. ಈ ಎಲ್ಲಾ ಪ್ರಕ್ರಿಯೆಗಳು ಮುಂದುವರಿಯಲು ನಾವು ಸರಕಾರದ ಮೇಲೆ ಒತ್ತಡ ಹೇರಿದ್ದೇವೆ.

ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರು ನಾಮಕರಣ ಮಾಡಲು ಜಿಲ್ಲೆಯ ಜನ ಜಾತಿ ಮತ ಮರೆತು ಹೋರಾಟ ನಡೆಸಿದಾಗ ಹೆಚ್ಚಿನ ಬೆಂಬಲ ಸಿಗುತ್ತದೆ ಎಂದು ಹೇಳಿದರು.

By suddi9

Leave a Reply

Your email address will not be published. Required fields are marked *