ಬಂಟ್ವಾಳ : ಕೃಷಿ ವಿಜ್ಞಾನ ಕೇಂದ್ರ ಮಂಗಳೂರು, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ಎಂಸಿಫ್ ಮಂಗಳೂರು ಇವರ ನೇತೃತ್ವದಲ್ಲಿ ವಿಶ್ವ ಮಣ್ಣು ಆರೋಗ್ಯ ದಿನಾಚರಣೆ ಪ್ರಯುಕ್ತ ಮಣ್ಣು ಮತ್ತು ನೀರು ಪರೀಕ್ಷೆ ತರಬೇತಿ ಕಾರ್ಯಕ್ರಮ ಕಾವಳಮೂಡೂರು ಗ್ರಾಮದ ಕೆದ್ದಳಿಕೆ ಸ.ಹಿ.ಪ್ರಾ. ಶಾಲೆಯಲ್ಲಿ ನಡೆಯಿತು.
ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ. ರಮೇಶ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರೈತರು ಮಣ್ಣು ಪರೀಕ್ಷೆ ಮಾಡುವ ಮೂಲಕ ಉತ್ತಮ ಇಳುವರಿ ಪಡೆಯಬಹುದು. ಇಂತಹ ತರಬೇತಿ ಕಾರ್ಯಕ್ರಮಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು. ಹಾಗೂ ಕೃಷಿ ವಿಜ್ಞಾನ ಕೇಂದ್ರದಿಂದ ದೊರಕುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. 
ಎಂಸಿಎಫ್ನ ಮಾರ್ಕೆಟಿಂಗ್ ಅಽಕಾರಿ ಮಧು, ಕೆದ್ದಳಿಕೆ ಹಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಕುಮಾರ್ ಉಪಸ್ಥಿತರಿದ್ದರು. ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ. ಮಲ್ಲಿಕಾರ್ಜುನ ಮಣ್ಣು ಪರೀಕ್ಷೆಯ ಪ್ರಾಮುಖ್ಯತೆ ಮತ್ತು ಮಣ್ಣು ಪರೀಕ್ಷೆ ನಡೆಸುವ ಕುರಿತು ತರಬೇತಿ ಹಾಗೂ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.ಈ ಸಂದರ್ಭದಲ್ಲಿ ವಿಶ್ವ ಮಣ್ಣು ದಿನಾಚರಣೆ ಅಂಗವಾಗಿ ಕೆದ್ದಳಿಕೆ ಗ್ರಾಮದ ಪ್ರಗತಿಪರ ರೈತರಾದ ಡಾಲಿ ಮತ್ತು ಲೋಕಯ್ಯ ಅವರನ್ನು ಸಮ್ಮಾನಿಸಲಾಯಿತು.ಭಾರತೀಯ ವಿಕಾಸ ಟ್ರಸ್ಟ್ನ ಅಽಕಾರಿ ಜೀವನ್ ಕೊಲ್ಯ ಸ್ವಾಗತಿಸಿದರು. ನಿತಿನ್ ಕಾರ್ಯಕ್ರಮ ನಿರೂಪಿಸಿದರು.
