ಬಂಟ್ವಾಳ ತಾಲೂಕಿನ ರಾಯಿ ಸಮೀಪದ ಕೈತ್ರೋಡಿ ಕ್ವಾರ್ಟಸ್೯ ಶ್ರೀ ಕೊರಗಜ್ಜ ಕ್ಷೇತ್ರದಲ್ಲಿ ಇದೇ 15ರಂದು ಚಂಡಿಕಾಯಾಗ ನಡೆಯಲಿರುವ ಹಿನ್ನೆಲೆಯಲ್ಲಿ ಇಲ್ಲಿನ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತಿತರ ಸಂಘಟನೆ ಸದಸ್ಯರು ಭಾನುವಾರ ಶ್ರಮಾದಾನ ನಡೆಸಿದರು.
ಕ್ಷೇತ್ರದ ಧರ್ಮ ದರ್ಶಿ ಲೋಕೇಶ್, ಯೋಜನೆ ಮೇಲ್ವಿಚಾರಕಿ ಹರಿಣಾಕ್ಷಿ ರೈ, ಮಾಜಿ ವಲಯಾಧ್ಯಕ್ಷ ಚಂದಪ್ಪ ಪೂಜಾರಿ ಮತ್ತಿತರರು ಇದ್ದರು.
