ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ, ಜಸ್ಟೀಸ್ ಕೆ.ಎಸ್. ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಇದರ ಸಹಯೋಗದೊಂದಿಗೆ ಈ ಹಿಂದೆ ಪ್ರತೀ ಮಂಗಳವಾರ ನಡೆಯುತ್ತಿದ್ದ ಕಣ್ಣಿನ ಉಚಿತ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ ಡಿ.22 ಮಂಗಳವಾರದಿಂದ ಪುನಾರಂಭಗೊಳ್ಳಲಿದೆ.

ಇನ್ನು ಮುಂದಿನ ಪ್ರತೀ ಮಂಗಳವಾರ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ಈ ಶಿಬಿರ  ನಡೆಯಲಿದ್ದು ಸಾರ್ವಜನಿಕರು ಇದರ ಪ್ರಯೋಜನ ಪಡೆಯುವಂತೆ ಹಾಗೂ ಆಗಮಿಸುವ ಎಲ್ಲರೂ ಕೋವಿಡ್ ಮುನ್ನೆಚ್ಚರಿಕೆಯಾಗಿ ಖಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *