ಮೂಡುಬಿದಿರೆ : ಸುಹಾಸ್ತಿ ಯುವ ಜೈನ್ ಮಿಲನ್ ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಜೈನಧರ್ಮ ಪೇಸ್ಬುಕ್ ಪುಟದ ಸಹಭಾಗಿತ್ವದೊಂದಿಗೆ
ಡಿ 20. ರಂದು ನಡೆಯುವ ಅಂತರಾಷ್ಟ್ರೀಯ ಮಟ್ಟದ ಜಿನ ಸಮ್ಮಿಲನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನುಇತಿಹಾಸ ಪ್ರಸಿದ್ಧ ಸಾವಿರ ಕಂಬದ ಬಸದಿಯಲ್ಲಿ ಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ಅವರು ಭಗವಾನ್ ಚಂದ್ರನಾಥ ಸ್ವಾಮಿಯ ಸನ್ನಿಧಿಯಲ್ಲಿ ಇಟ್ಟು ವಿಶೇಷ ಪ್ರಾರ್ಥನೆ ಸಲ್ಲಿಸಿ ನಂತರ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಎಂ. ಸಿ. ಎಸ್ ಬ್ಯಾಂಕ್ ಅಧ್ಯಕ್ಷ ಬಾಹುಬಲಿ ಪ್ರಸಾದ್ , ಜೈನ್ ಮಿಲನ್ ವಲಯ – 8 ನಿರ್ದೇಶಕ ಜಯರಾಜ್ ಕಂಬಳಿ, ಮೂಡುಬಿದಿರೆ ಜೈನ್ ಮಿಲನ್ ಅಧ್ಯಕ್ಷೆ , ವಕೀಲೆ ಶ್ವೇತಾ ಜೈನ್, ಕಾರ್ಕಳ ಯುವ ಜೈನ್ ಮಿಲನ್ ಕಾರ್ಯದರ್ಶಿ ಸಮೃದ್ಧ್ ಜೈನ್, ಹಾಗೂ ಬೆಳಗಾಂ ಉದ್ಯಮಿ ಸುಬೋಧ್ ಬಲ್ಲಾಳ್ ಮೊದಲಾದವರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *