ಬಂಟ್ವಾಳ:  ಮಾಣಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಬೆಂಬಲಿತ  ಅಭ್ಯರ್ಥಿಗಳ ಪರವಾಗಿ ಎ.ಐ.ಸಿ.ಸಿ ಪ್ರದಾನ  ಕಾರ್ಯದರ್ಶಿ ವಿಷ್ಣುನಾಥನ್ ರವರು ಶನಿವಾರ ಚುನಾವಣಾ ಪ್ರಚಾರ ನಡೆಸಿದರು.ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಅವರ ನಿವಾಸದಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ವಿಷ್ಣುನಾಥನ್,ಪಕ್ಷದಿಂದ ಸಾಕಷ್ಟು ಲಾಭ ಪಡೆದು ಈಗ ಪಕ್ಷವನ್ನು ತ್ಯಜಿಸುವವರ ಬಗ್ಗೆ ಕಾರ್ಯಕರ್ತರು ಚಿಂತಿಸದೆ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವಂತೆ ಕರೆ ನೀಡಿದರು.IMG-20201219-WA0038
ಮಾಜಿ ಸಚಿವ ರಮಾನಾಥ ರೈ, ವಿ.ಪ.ಸದಸ್ಯ,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್,ಜಿಪಂ ಸದಸ್ಯರಾದ ಎಂ.ಎಸ್.ಮಹಮ್ಮದ್, ಪದ್ಮಶೇಖರ್ ಜೈನ್,ಕಾರ್ಪೋರೇಟರ್ ಗಳಾದ ಶಶಿಧರ್ ಹೆಗ್ಡೆ,ರವೂಫ್,ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ,ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್,ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ,ಬಾಲಕೃಷ್ಣ ಕೋಡಾಜೆ ಮೊದಲಾದವರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *