ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ರಿ ಬಂಟ್ವಾಳ ತಾಲೂಕು ಶಾಖೆಯ ಪದಾಧಿಕಾರಿಗಳು ಶನಿವಾರ ತಹಶೀಲ್ದಾರರನ್ನು ಭೇಟಿಯಾಗಿ ಕರ್ತವ್ಯ ನಿರತ ಸರಕಾರಿ ನೌಕರರ ಅಂಚೆ ಮತದಾನದ ಗೌಪ್ಯತೆ ಕಾಪಾಡಲು ವಿಶೇಷ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಯಿತು. ಈ ಬಗ್ಗೆ ಸಕರಾತ್ಮಕವಾಗಿ ಸ್ಪಂದಿಸಿದ ತಹಶೀಲ್ದಾರ್ ಅವರು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಸರಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ ಮೇರಾವು,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಸರಕಾರಿ ನೌಕರರ ಸಂಘದ ಉಪಾಧ್ಯಕ್ಷ ಮಂಜುನಾಥ್ ಕೆ. ಹೆಚ್, ಸರಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್, ಶಿಕ್ಷಕರ ಸಂಘದ ಪ್ರತಿನಿಧಿ ಯತೀಶ್, ಕಾರ್ಯಕಾರಿ ಸಮಿತಿ ಸದಸ್ಯ ಸೀತಾರಾಮ ಪೂಜಾರಿ ಉಪಸ್ಥಿತರಿದ್ದರು.

