ಬಂಟ್ವಾಳ: ಬಡಗಬೆಳ್ಳೂರು ಗ್ರಾಮದಲ್ಲಿ ನವೀಕರಣಗೊಳ್ಳುತ್ತಿರುವ ಪಲ್ಲಿಪಾಡಿ ಶ್ರೀ ಗೋಪಾಲಕೃಷ್ಣ ಲಕ್ಷ್ಮೀ ನರಸಿಂಹ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮವು ಜನವರಿ 7 ಗುರುವಾರದಂದು ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ.


ವೇದ ಮೂರ್ತಿ ಶ್ರೀ ಪೊಳಲಿ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ಬೆಳಗ್ಗೆ 11 ಗಮಟೆಯಿಂದ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ದೇವರಿಗೆ ಚಿನ್ನ, ಬೆಳ್ಳಿ ಹರಕೆ ಒಪ್ಪಿಸಬಹುದು ಎಂದು ದೇವಳದ ಮೊಕ್ತೇಸರರು, ಅಡಳಿತ ಮಂಡಳಿ ಹಾಗೂ ಜೀರ್ಣೋದ್ಧಾರ ಸಮಿತಿ ಜಂಟಿ ಪ್ರಕಟಣೆಯಲ್ಲಿ ತಿಳಿಸಿದೆ.
