ಮೂಡುಬಿದಿರೆ; ಪಡುಮಾರ್ನಾಡು ಗ್ರಾಮ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜನವರಿ 12ರಂದು ಬೆಳಗ್ಗೆ 10.30ಕ್ಕೆ ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಹಾಗೂ 14ನೇ ಹಣಕಾಸು ಯೋಜನೆಯ ಕಾಮಗಾರಿಗಳ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ ಜರಗಲಿದೆ. ಉದ್ಯೋಗ ಚೀಟಿದಾರರು , ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗವಹಿಸಬೇಕು ಎಂದು ಪಂಚಾಯಿತಿಯ ಆಡಳಿತಾಧಿಕಾರಿ ತಿಳಿಸಿದ್ದಾರೆ.

