ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಾಯಣ್ಣ ಮೂಡುಬಿದಿರೆಗೆ ಭೇಟಿ
ಮೂಡುಬಿದಿರೆ: ಕರ್ನಾಟಕ ರಾಜ್ಯ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಸ್ಥಾನದ ಅಭ್ಯರ್ಥಿ, ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮಾಯಣ್ಣ ಅವರು ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಮೂಡುಬಿದಿರೆ ಪ್ರೆಸ್‍ಕ್ಲಬ್‍ಗೆ ಭೇಟಿ ಸೋಮವಾರ ಸಾಯಂಕಾಲ ನೀಡಿದರು.
ಪತ್ರಕರ್ತರ ಸಂಘದ ಸದಸ್ಯರ ಜೊತೆ ಸಮಾಲೋಚಿಸಿ, ಕನ್ನಡ ಸಾಹಿತ್ಯ ಪರಿಷತ್ತನ್ನು ರಾಜ್ಯ ಶಕ್ತಿ ಕೇಂದ್ರವಾಗಿಸುವ ಆಶಯದೊಂದಿಗೆ ನಾನು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ಕಣದಲ್ಲಿದ್ದೇನೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾವಿರಕ್ಕೂ ಅಧಿಕ ಪರಿಷತ್ ಮತಗಳಿದ್ದು, ಇಲ್ಲಿಯ ಹಾಗೂ ವಿವಿಧ ಜಿಲ್ಲೆಗಳ ಜನರ ವಿಶ್ವಾಸದೊಂದಿಗೆ ಗೆಲ್ಲುವ ವಿಶ್ವಾಸವಿದೆ. ವಿವಿಧ ಹಂತಗಳಲ್ಲಿ ವಿವಿಧ ಪ್ರದೇಶದ ಪರಿಷತ್ ಮತದಾರರನ್ನು ಭೇಟಿ ಮಾಡಿ, ಮತಯಾಚನೆ ಮಾಡುತ್ತಿದ್ದೇನೆ ಎಂದು ಅವರು ತಿಳಿಸಿದರು.
ಮೂಡುಬಿದಿರೆ ಪ್ರೆಸ್‍ಕ್ಲಬ್ ಕಾರ್ಯದರ್ಶಿ ಯಶೋಧರ ವಿ.ಬಂಗೇರ, ಕೋಶಾಧಿಕಾರಿ ಎಂ. ಗಣೇಶ್ ಕಾಮತ್, ಸದಸ್ಯರಾದ ಧನಂಜಯ ಮೂಡುಬಿದಿರೆ, ಬಿ.ಸೀತಾರಾಮ ಆಚಾರ್ಯ ಉಪಸ್ಥಿತರಿದ್ದರು.