ಬಂಟ್ವಾಳ:ಗ್ರಾಮ ಪಂಚಾಯತ್ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಯ ಮೀಸಲಾತಿಯನ್ನು ಯಾವುದೇ ಲೋಪವಿಲ್ಲದಂತೆ ಪಾರದರ್ಶಕವಾಗಿ ನಡೆಸುವಂತೆ ಮಾಜಿ ಸಚಿವರಾದ ನೇತೃತ್ವದ ಕಾಂಗ್ರೆಸ್ ನಿಯೋಗ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿ ಮನವಿ ಮಾಡಿದೆ. ಹಾಗೆಯೇ ಜಿಲ್ಲೆಯ ವಿವಿಧ ಸಮಸ್ಯೆಗಳ ಬಗ್ಗೆಯು ಮಾಜಿ ಸಚಿವ ಬಿ.ರಮಾನಾಥ ರೈ ಅವರ ನಿಯೋಗ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಅವರೊಂದಿಗೆ ಚರ್ಚಿಸಿದರು.
ಇದಕ್ಕೆ ಜಿಲ್ಲಾಧಿಕಾರಿ ಯವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ನಿಯೋಗದಲ್ಲಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್.ಮಹಮ್ಮದ್, ಪದ್ಮಶೇಖರ್ ಜೈನ್, ಮಹಾನಗರ ಪಾಲಿಕೆ ಸದಸ್ಯರಾದ ಭಾಸ್ಕರ್ ಮೊಯಿಲಿ,ರವೂಫ್,ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಮಾಯಿಲಪ್ಪ ಸಾಲಿಯಾನ್, ಜಗದೀಶ್ ಕೊಯಿಲ,ಸಚಿನ್ ರಾಜ್ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು. 
