ಮಹಾರಾಷ್ಟ್ರ: ಮಹಾರಾಷ್ಟ್ರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ ಹಾಗೂ ಕಾಂಗ್ರೆಸ್ ಧೂಳಿಪಟವಾಗುವ ಲಕ್ಷಣ ಬಹುತೇಕ ಕಂಡುಬಂದಿದ್ದು, ಬಿಜೆಪಿ ಸ್ಪಷ್ಟ ಬಹುಮತದಿಂದ ಗೆಲುವು ಸಾಧಿಸುವುದು ನಿಚ್ಚಳವಾಗಿದೆ.
md
ಮಹಾರಾಷ್ಟ್ರದ 288 ಕ್ಷೇತ್ರಗಳಲ್ಲಿ ಇದುವರೆಗಿನ ಮಾಹಿತಿ ಪ್ರಕಾರ ಬಿಜೆಪಿ 111 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ ಸಾಧಿಸಿದೆ. ಶಿವಸೇನೆ 62 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿ ಎರಡನೇ ಸ್ಥಾನದಲ್ಲಿದೆ. ಆದರೆ ಕಾಂಗ್ರೆಸ್ 47 ಕ್ಷೇತ್ರಗಳಲ್ಲಷ್ಟೇ ಮುನ್ನಡೆ ಸಾಧಿಸಿದ್ದು ಸ್ಥಾನ ಕಳೆದುಕೊಳ್ಳುವುದು ಬಹುತೇಕ ಸ್ಪಷ್ಟವಾದಂತಾಗಿದೆ.
ಪ್ರತಿಭಟನೆ: ದೆಹಲಿಯ ಕಾಂಗ್ರೆಸ್ ಕಚೇರಿಯ ಮುಂದೆ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು `ಪ್ರಿಯಾಂಕ ಲಾವೋ, ಕಾಂಗ್ರೆಸ್ ಬಚಾವೋ ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ.

By Suddi9

Leave a Reply

Your email address will not be published. Required fields are marked *