ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ವಿವಿಧ ಹಂತದ ನಾಯಕರು,ಜನಪ್ರತಿನಿಧಿಗಳು ಬಿಜೆಪಿ ಸೇರ್ಪಡೆಯ ಪರ್ವ ಮುಂದುವರಿದಿದೆ.ಇದರ ಭಾಗವಾಗಿ ಶನಿವಾರ ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ನ ಸದಸ್ಯರೋರ್ವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.IMG-20210123-WA0094

ಅತಂತ್ರಗೊಂಡಿದ್ದ ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ನ ಪಕ್ಷೇತರ ಸದಸ್ಯ ಸತೀಶ್ ಪೂಜಾರಿ ಕೊಪ್ಪರಿಗೆ ಇವರು ಬಿ.ಸಿ.ರೋಡಿನಲ್ಲಿರುವ ಪಕ್ಷದ ಕಚೇರಿಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಸಮಕ್ಷಮದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಈ  ಬೆಳವಣಿಗೆಯಿಂದ ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿ ಬೆಂಬಲಿತರು ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ.

ಈ ಸಂದರ್ಭದಲ್ಲಿ ಬಂಟ್ವಾಳ ಕ್ಷೇತ್ರ ಬಿಜೆಪಿ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ,ಕಾರ್ಯದರ್ಶಿ ರಮಾನಾಥ ರಾಯಿ, ಯುವ ಮೋರ್ಚಾದ ಸುದರ್ಶನ್ ಬಜ.ಪ್ರಮುಖರಾದ ಸನತ್ ಕುಮಾರ್ ರೈ.ತನಿಯಪ್ಪಗೌಡ ಮತ್ತು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *