ಬಂಟ್ವಾಳ:ಇಲ್ಲಿನ ಕಾರಂಬಡೆ ಶ್ರೀ ಮಹಮ್ಮಾಯಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಭಾನುವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆ ಕಾರ್ಯಕ್ರಮವನ್ನು ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಉದ್ಘಾಟಿಸಿದರು. ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿ, ಕಾರ್ಯಕ್ರಮದ ಯಶಸ್ವಿಗೆ ಸಮಿತಿ ಪದಾಧಿಕಾರಿಗಳು ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದರು.
ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಹರೀಶ್ ಕೋಟ್ಯಾನ್, ಪ್ರಧಾನ ಅರ್ಚಕ ಕೇಶವ ಶಾಂತಿ, ಜಿಲ್ಲಾ ಪಂಚಾಯಿತಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಸದಸ್ಯ ಕೆ.ಸಂಜೀವ ಪೂಜಾರಿ, ಬ್ಲಾಕ್ ಕಾಂಗ್ರೆಸ್ ಮುಖಂಡ ಬೇಬಿ ಕುಂದರ್, ಬಿಲ್ಲವ ಮುಖಂಡ ಕೆ.ಸೇಸಪ್ಪ ಕೋಟ್ಯಾನ್, ಪುರಸಭಾ ಸದಸ್ಯ ವಾಸು ಪೂಜಾರಿ, ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕ ಅಧ್ಯಕ್ಷ ಮೋಹನ್ ಗೌಡ, ದಯಾನಂದ, ಗೋಪಾಲಕೃಷ್ಣ ಮತ್ತಿತರರು ಇದ್ದರು.
