ಬಂಟ್ವಾಳ: ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಯಲ್ಲಿ ಪಲ್ಸ್ ಪೋಲಿಯೋ ವಿತರಣೆಗೆ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ಭಾನುವಾರ ಚಾಲನೆ ಡಿದರು.

ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ಮಾತನಾಡಿ, ತಾಲ್ಲೂಕಿನಲ್ಲಿ ೫ ವರ್ಷದೊಳಗಿನ ಒಟ್ಟು ೩೦೩೫೨ ಮಕ್ಕಳಿದ್ದು, ಇವರಿಗೆ ೭೮೪ ಮಂದಿ ಕಾರ್ಯಕರ್ತೆಯರು ೧೯೦ ಬೂತ್ ಮೂಲಕ ಲಸಿಕೆ ವಿತರಿಸುವರು ಎಂದು ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ಆಡಳಿತ ವೈದ್ಯಾಧಿಕಾರಿ ಡಾ.ಪುಷ್ಪಲತಾ, ರೋಟರಿ ಕ್ಲಬ್ ಪದಾಧಿಕಾರಿಗಳು ಇದ್ದರು.
