ಕೈಕಂಬ : ಗುರುಪುರ ಪೇಟೆಯ ಅಂಗನವಾಡಿ ಕೇಂದ್ರದಲ್ಲಿ ಜ. ೩೧ರಂದು ಆಯೋಜಿಸಲಾದ ಪೋಲಿಯೋ ಲಸಿಕೆ ನೀಡಿಕೆ ಅಭಿಯಾನದಲ್ಲಿ ಗುರುಪುರ ಗ್ರಾಪಂ ಮಾಜಿ ಉಪಾಧ್ಯಕ್ಷ ಜಿ ಎಂ ಉದಯ ಭಟ್, ಮಗುವಿಗೆ ಲಸಿಕೆ ನೀಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೇಂದ್ರದಲ್ಲಿ ನೂರಕ್ಕೂ ಹೆಚ್ಚು ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರಾದ ಸುಜಾತಾ, ಮಲ್ಲಿಕಾ, ಸಹಾಯಕಿ ರಾಜೇಶ್ವರಿ, ಆಶಾ ಕಾರ್ಯಕರ್ತೆ ಶೀಲಾಕ್ಷಿ ಉಪಸ್ಥಿತರಿದ್ದರು.
