ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ಅಧ್ಯಕ್ಷರಾದ ಸುದರ್ಶನ್ ಎಂ ಮೂಡಬಿದ್ರೆ ಅವರ ಹುಟ್ಟುಹಬ್ಬದಂದು ನಂದಾವರ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಕ್ಷೇತ್ರಕ್ಕೆ ಸುದರ್ಶನ್ ದಂಪತಿ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಕ್ಷೇತ್ರ ಸಮಿತಿಯ ವತಿಯಿಂದ ಅವರನ್ನು ಕ್ಷೇತ್ರದ ಅಧ್ಯಕ್ಷರಾದ ದೇವಪ್ಪ ಪೂಜಾರಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ, ಕಾರ್ಯದರ್ಶಿ ಉದಯ ಸಜಿಪ , ಮಾಜಿ ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಯಶವಂತ ದೇರಾಜೆ, ಅರವಿಂದ ಭಟ್ ಸಜಿಪ ಹಾಗು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
