ಕೈಕಂಬ:ಕರ್ನಾಟಕದ ಬಾಗಲಕೋಟೆಯಲ್ಲಿ ನಡೆದ ರಾಜ್ಯಮಟ್ಟದ ವುಶು ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ವುಶು ಸಂಸ್ಥೆಯನ್ನು ಪ್ರತಿನಿಧಿಸಿದ ಇನ್ಸ್ಟಿಟ್ಯೂಟ್ ಆಫ್ ಕರಾಟೆ ಎಂಡ್ ಮಾರ್ಷಲ್ ಆರ್ಟ್ಸ್ ಸಂಸ್ಥೆಯ ಸದಸ್ಯರು 10 ಚಿನ್ನ, 3 ಬೆಳ್ಳಿ ಮತ್ತು 4 ಕಂಚಿನ ಪದಕವನ್ನು ಪಡೆದು ದ.ಕ ವುಶು ಸಂಸ್ಥೆಯ ತಂಡವು ರಾಜ್ಯ ಮಟ್ಟದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದರು.
ಈ ತಂಡವು ಸಂಸ್ಥೆಯ ಮುಖ್ಯ ಶಿಕ್ಷಕರಾದ ನಿತಿನ್ ಎನ್ ಸುವರ್ಣ ಮತ್ತು ಶಿಕ್ಷಕರಾದ ಸಂಪತ್ ಕುಮಾರ್ ಇವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ.
