ಉಜಿರೆ: ಕಲೆಯಿಂದ ಮನಸ್ಸು ಅರಳುತ್ತದೆ, ಬುದ್ಧಿ ಬೆಳೆಯುತ್ತದೆ. ಮನೋವಿಕಾಸ, ಆತ್ಮೋನ್ನತಿ ಮತ್ತು ಮನೋರಂಜನೆಗಾಗಿ ಕಲೆ ಅಗತ್ಯ.ನಾಟ್ಯಶಾಸ್ತ್ರ ಎಲ್ಲಾ ಕಲೆಗಳಿಗೂ ಮಾತೃಸ್ಥಾನದಲ್ಲಿದೆಎಂದುಖ್ಯಾತ ಚಲನಚಿತ್ರ ನಟಡಾ.ಶ್ರೀಧರ್ ಹೇಳಿದರು.ಅವರು ಶನಿವಾರ ಧರ್ಮಸ್ಥಳದಲ್ಲಿ ಶಾಂತಿವನಟ್ರಸ್ಟ್ಆಶ್ರಯದಲ್ಲಿ ಆಯೋಜಿಸಿದ ೧೮ನೇ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಯ ವಿಜೇತರಿಗೆ ಪುರಸ್ಕಾರ ನೀಡಿ ಮಾತನಾಡಿದರು.
ತಾನುಆರಂಭದಲ್ಲಿಚಿತ್ರಕಲಾವಿದನಾಗಿ ನಂತರ ಸಂಗೀತ ಮತ್ತು ನೃತ್ಯಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದೆಎಂದು ಹೇಳಿದ ಅವರು, ಚಿತ್ರಕಲೆಯಲ್ಲಿ ಭಾವ, ಸೌಂದರ್ಯ ಮತ್ತುತಂತ್ರಗಾರಿಕೆಅಡಕವಾಗಿದೆ. ಚಿತ್ರಕಲೆಗೆವಸ್ತುವಿನ ಆಯ್ಕೆ ಮುಖ್ಯವಾಗಿದೆ.ಮನಸ್ಸಿನ ಕಲ್ಪನೆಗಳಿಗೆ ಪ್ರಜ್ಞೆಯನ್ನು ಸೇರಿಸಿದಾಗ ಆಕರ್ಷಕಚಿತ್ರರೂಪಿಸಬಹುದು.
ನೋಡಿದಅನುಭವವನ್ನು ಅಭಿವ್ಯಕ್ತಗೊಳಿಸಲು ಚಿತ್ರಕಲೆಅತ್ಯಂತ ಪರಿಣಾಮಕಾರಿ ಮಾಧ್ಯಮವಾಗಿದೆ.ಕಲೆಯನ್ನು ಅನುಭವಿಸಿ, ಆಸ್ವಾದಿಸಿ, ಆನಂದಿಸಬೇಕು.ಚಿತ್ರಕಲೆಯಲ್ಲಿಧರ್ಮ, ಸಂಸ್ಕೃತಿ, ಸಾಮಾಜಿಕ ಪ್ರಜ್ಞೆ, ವಿಜ್ಞಾನ ಹಾಗೂ ಸಮಕಾಲೀನ ಸಮಾಜದ ಪ್ರತಿಬಿಂಬ – ಎಲ್ಲವೂ ಸಮ್ಮಿಳನವಾಗಿರುತ್ತದೆ ಎಂದುಡಾ. ಶ್ರೀಧರ್ ಅಭಿಪ್ರಾಯಪಟ್ಟರು.ಚಿತ್ರಕಲೆಯು ಮಕ್ಕಳ ಸುಪ್ತಪ್ರತಿಭೆಯದ್ಯೋತಕವಾಗಿದೆ.ಸ್ಪರ್ಧೆಯಲ್ಲಿ ಪುರಸ್ಕಾರ ಪಡೆಯುವುದಕ್ಕಿಂತಲೂ ಭಾಗವಹಿಸುವುದು ಮುಖ್ಯಎಂದುಅವರು ಸಲಹೆ ನೀಡಿದರು.

ಧರ್ಮಸ್ಥಳದಲ್ಲಿ ಸ್ವಚ್ಛತೆ, ಪಾವಿತ್ರತ್ಯತೆ, ನಿಷ್ಠೆ, ಪ್ರಾಮಾಣಿಕತೆ ಹಾಗೂ ಸಮರ್ಪಣಾ ಭಾವದ ಸೇವೆಯನ್ನುಅವರು ಶ್ಲಾಘಿಸಿದರು.ಧರ್ಮಸ್ಥಳಕ್ಕೆ ಬಂದಕೂಡಲೆಇಲ್ಲಿನ ಪ್ರಶಾಂತ ಹಾಗೂ ಪವಿತ್ರ ಪರಿಸರದಿಂದ ಭಕ್ತರಲ್ಲಿ ಬಾಹ್ಯವಾಗಿ ಹಾಗೂ ಆಂತರಿಕವಾಗಿ ಸಾಕಷ್ಟು ಧನಾತ್ಮಕ ಪರಿಣಾಮಗಳಾಗುತ್ತವೆ. ಧರ್ಮಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಇಚ್ಛಾಶಕ್ತಿಯನ್ನುಅವರು ಶ್ಲಾಘಿಸಿದರು.ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ , ವಿದ್ಯಾರ್ಥಿಗಳ ಸುಪ್ತ ಪ್ರತಿಭೆಯ ವಿಕಸನಕ್ಕಾಗಿ ಅಂಚೆ-ಕುಂಚ ಸ್ಪರ್ಧೆಏರ್ಪಡಿಸಲಾಗುತ್ತದೆ. ಚಿತ್ರಕಲೆಯಲ್ಲಿಅನುಕರಣೆ ಸಲ್ಲದು.ವಿದ್ಯಾರ್ಥಿಗಳು ವೈವಿಧ್ಯಮಯಅಭಿರುಚಿ ಹಾಗೂ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದರು.
ಚಿತ್ರಕಲೆಯಲ್ಲಿಉನ್ನತ ಶಿಕ್ಷಣ ಮಾಡುವವರಿಗೆ ಧರ್ಮಸ್ಥಳದಿಂದ ವಿಶೇಷ ವಿದ್ಯಾರ್ಥಿ ವೇತನ ನೀಡಿ ಪ್ರೋತ್ಸಾಹಿಸಲಾಗುವುದುಎಂದು ಹೆಗ್ಗಡೆಯವರು ತಿಳಿಸಿದರು.ಹೇಮಾವತಿ ವೀ. ಹೆಗ್ಗಡೆ ಮತ್ತು ಡಿ. ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು.ಬೆಂಗಳೂರಿನ ಖ್ಯಾತಚಿತ್ರಕಲಾವಿದ ಬಾಗೂರು ಮಾರ್ಕಾಂಡೇಯ ಹಾಗೂ ಮಂಗಳೂರಿನ ಸನಾತನ ನಾಟ್ಯಾಲಯದಕಲಾವಿದರಿಂದ ಕುಂಚ-ಗಾನ-ನೃತ್ಯ ವೈಭವ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.

