ಬಂಟ್ವಾಳ:ಇಲ್ಲಿನ ಸಿದ್ಧಕಟ್ಟೆ ಸಮೀಪದ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ಕಂಬಳಕ್ಕೆ ಉಪಮುಖ್ಯಮಂತ್ರಿ ಲಕ್ಷö್ಮಣ ಸವದಿ ಅವರು ರೂ ೧೧ಲಕ್ಷ ಮೊತ್ತದ ವೈಯಕ್ತಿಕ ದೇಣಿಗೆ ನೀಡುವ ಮೂಲಕ ಅವರು ಈಚೆಗೆ ನೀಡಿದ್ದ ಭರವಸೆ ಈಡೇರಿಸಿದ್ದಾರೆ. ಕಂಬಳ ಸಮಿತಿ ಅಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ ಇವರಿಗೆ ಗುರುವಾರ ಬೆಂಗಳೂರಿನಲ್ಲಿ ಚೆಕ್ ಹಸ್ತಾಂತರಿಸಿದ್ದಾರೆ. ಬಿಜೆಪಿ ಯುವ ಮುಖಂಡ ಆಶ್ರಿತ್ ನೋಂಡಾ ಅಡ್ಯಾರುಗುತ್ತು, ಕಂಬಳ ಸಮಿತಿ ಕಾರ್ಯದರ್ಶಿ ಪ್ರಣೀತ್ ಹಿಂಗಾಣಿ, ಸುಧೀಶ್ ಭಟ್ ಧರ್ಮಸ್ಥಳ ಇವರು ಜೊತೆಗಿದ್ದರು.15btl-Savadi

ಜ.೩೧ರಂದು ನಡೆದ ಬಂಟ್ವಾಳ ಮತ್ತು ಬೆಳ್ತಂಗಡಿ ತಾಲ್ಲೂಕಿನ ಗಡಿಭಾಗದಲ್ಲಿರುವ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆಉಪ ಮುಖ್ಯಮಂತ್ರಿ ಲಕ್ಷö್ಮಣ ಸವದಿ ಭೇಟಿ ನೀಡಿದ್ದರು. ಅಂದು ಅವರು ಮಾತನಾಡಿ, ಈ ಕಂಬಳಕ್ಕೆ ರೂ ೧೧ಲಕ್ಷ ಮೊತ್ತದ ವೈಯಕ್ತಿಕ ದೇಣಿಗೆ ನೀಡುವುದಾಗಿ ಭರವಸೆ ನೀಡಿದ್ದರು. ಮಾತ್ರವಲ್ಲದೆ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಜೊತೆಗೆ ಮಾತುಕತೆ ನಡೆಸಿ ಸರ್ಕಾರದಿಂದಲೂ ಜಿಲ್ಲೆಯ ಎಲ್ಲಾ ಕಂಬಳಗಳಿಗೆ ಅನುದಾನ ದೊರಕಿಸಿ ಕೊಡುವುದಾಗಿ ಭರವಸೆ ನೀಡಿದ್ದರು. ಇದೀಗ ಅವರು ಭರವಸೆ ನೀಡಿ ಕೇವಲ ಎರಡು ವಾರದೊಳಗೆ ದೇಣಿಗೆ ಚೆಕ್ ಹಸ್ತಾಂತರಿಸಿರುವುದು ಇಲ್ಲಿನ ಕಂಬಳಾಸಕ್ತರಲ್ಲಿ ಮತ್ತಷ್ಟು ಸಂತಸಕ್ಕೆ ಕಾರಣವಾಗಿದೆ.

ಗ್ರಾಮೀಣ ಕೃಷಿಕರನ್ನು ಹೊಂದಿರುವ ಹೊಕ್ಕಾಡಿಗೋಳಿ ಕಂಬಳ ಕರೆಗೆ ಹೊಸ ರೂಪ ನೀಡುವುದರ ಜೊತೆಗೆ ವಿವಿಧ ಮೂಲಭೂತ ಸೌಕರ್ಯ ಒದಗಿಸಿ, ವೀಕ್ಷಕರಿಗೆ ಅನುಕೂಲವಾಗುವಂತೆ ಸುಸಜ್ಜಿತ ಗ್ಯಾಲರಿ ನಿರ್ಮಿಸಲು ಸ್ಥಳೀಯ ಸ್ಥಳದಾನಿಗಳ ಜೊತೆಗೆ ಮಾತುಕತೆ ನಡೆಸಿದ ಬಳಿಕ ಕಂಬಳ ಸಮಿತಿ ಮುನ್ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ನೋಣಾಲುಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿ ಇವರು ಪ್ರತಿಕ್ರಿಯಿಸಿದ್ದಾರೆ.

By Suddi9

Leave a Reply

Your email address will not be published. Required fields are marked *