ಬಂಟ್ವಾಳ:ಇಲ್ಲಿನ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರೋಟರಿ ಕ್ಲಬ್ ವತಿಯಿಂದ ಶನಿವಾರ ನಡೆದ ವಿವಿಧ ಕೊಡುಗೆಗಳ ವಿತರಣೆ ಕಾರ್ಯಕ್ರಮಕ್ಕೆ ಜಿಲ್ಲಾ ಗವರ್ನರ್ ರಂಗನಾಥ್ ಭಟ್ ಚಾಲನೆ ನೀಡಿದರು. ಗ್ರಾಮೀಣ ಶಿಕ್ಷಣ ಸಂಸ್ಥೆಗಳಿಗೆ ರೋಟರಿ ಕ್ಲಬ್ ವಿಶೇಷ ಕೊಡುಗೆ ಸಲ್ಲಿಸುತ್ತಿದ್ದು, ಇಲ್ಲಿಗೆ ರೂ 2 ಲಕ್ಷ ವೆಚ್ಚದ ಕುಡಿಯುವ ನೀರಿನ ಘಟಕ ಮತ್ತು ಜೆರಾಕ್ಸ್ ಯಂತ್ರ ನೀಡಿದೆ ಎಂದರು.

ಜಿಲ್ಲಾ ಉಪ ಗವರ್ನರ್ ಎನ್. ಪ್ರಕಾಶ ಕಾರಂತ್, ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ನಾರಾಯಣ ಹೆಗ್ಡೆ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ಹರಿಪ್ರಸಾದ್ ಬಿ. ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ದ್ದರು. ಸಂಯೋಜಕ ಡಾ.ರವಿ ಎಂ.ಎನ್, ದೈಹಿಕ ಶಿಕ್ಷಣ ನಿರ್ದೇಶಕ ಡಾ. ರಾಧಾಕೃಷ್ಣ ಎಚ್.ಬಿ., ಪ್ರೊ. ಶಾಂತಿರೋಚ್, ಪಂಕಜ, ಪವಿತ್ರಾ ಇದ್ದರು.
ಪ್ರೊ.ರೊನಾಲ್ಡ್ ಪ್ರವೀಣ್ ಕೊರೆಯಾ ಸ್ವಾಗತಿಸಿ, ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್ ಅಧ್ಯಕ್ಷ ಅಧ್ಯಕ್ಷ ಅಂಥೋನಿ ಸಿಕ್ವೇರಾ ವಂದಿಸಿದರು. ಉಪನ್ಯಾಸಕ ಉದಯ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.
