ಉಳ್ಳಾಲ: ಮಂಗಳೂರಿನ ಉಳ್ಳಾಲ ಠಾಣಾ ವ್ಯಾಪ್ತಿಯ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಯುವತಿಯೊರ್ವಳ ಶವ ಪತ್ತೆಯಾಗಿರುವ ಘಟನೆ ಬುಧವಾರ ಕುಂಪಲದಲ್ಲಿ ನಡೆದಿದೆ ಕುಂಪಲ ಆಶ್ರಯಕಾಲನಿ ನಿವಾಸಿ ಚಿತ್ತಪ್ರಸಾದ್ ಎಂಬವರ ಪುತ್ರಿ ಪ್ರೇಕ್ಷಾ(೧೭) ಶವವಾದ ಯುವತಿ ಎಂದು ತಿಳಿದು ಬಂದಿದೆ.
ಮಂಗಳೂರು ನಂತೂರು ಬಳಿಯ ನಿಟ್ಟೆ ಪಿಯುಸಿ ಕಾಲೇಜಿನಲ್ಲಿ ಪ್ರಥಮ ರ‍್ಷದ ವಿದ್ಯಾರ್ಥಿನಿಯಾಗಿದ್ದ ಈಕೆ ಇಂದು ಬುಧವಾರ ರಜೆ ಪಡೆದುಕೊಂಡು ಮನೆಯಲ್ಲೇ ಉಳಿದಿದ್ದಳು. ತಾಯಿ ಅಂಗನವಾಡಿ ಕೆಲಸಕ್ಕೆ ಹೋಗಿದ್ದ ಸಂದರ್ಭ ಮನೆಗೆ ಮೂವರು ಬಂದು ಹೋಗಿದ್ದರು ಎನ್ನಲಾಗಿದೆ .ಮಧ್ಯಾಹ್ನ ವೇಳೆ ಊಟಕ್ಕೆಂದು ಮನೆಗೆ ಬಂದ ಸಂದರ್ಭ ಕೋಣೆಯೊಳಗೆ ಪ್ರೇಕ್ಷಾಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳೀಯರು ಕೊಲೆ ಎಂದು ಶಂಕೆಯನ್ನು ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಉಳ್ಳಾಲ ಠಾಣಾ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.
ಮನೆಗೆ ಬಂದಿದ್ದ ಮೂವರು ಯಾರು ?
ಪ್ರೇಕ್ಷಾ ಮಾಡೆಲಿಂಗ್ ನಲ್ಲಿ ಆಸಕ್ತಿ ಹೊಂದಿದ್ದು ಇಂದು ಫೋಟೋ ಶೂಟ್ ಗಾಗಿ ಬೆಂಗಳೂರಿಗೆ ತೆರಳಲು ಸಿದ್ಧತೆ ನಡೆಸಿದ್ದಳು ಎನ್ನಲಾಗಿದೆ. ಆ ಕಾರಣಕ್ಕಾಗಿಯೇ ಕಾಲೇಜಿಗೆ ರಜೆ ಪಡೆದುಕೊಂಡಿದ್ದಳು ಎನ್ನಲಾಗಿದೆ . ಆದರೆ ಆಕೆಯ ಶವ ಪತ್ತೆಯಾಗಿರುವುದರಿಂದ ಮನೆಗೆ ಬಂದಿದ್ದ ಮೂವರ ಮೇಲೆ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
