ಕೈಕಂಬ: ಬಂಟ್ವಾಳ ಇಲ್ಲಿನ ಕರಿಯಂಗಳ ಗ್ರಾಮದ ಪೊಳಲಿ ಸಮೀಪದ ಕಂಚೇಶ್ವರ ನಿವಾಸಿ, ಹಿರಿಯ ಕಲ್ಲಂಗಡಿ ಕೃಷಿಕ ಶತಾಯುಷಿ ಕೆ.ಸೇಸು ಸಪಲ್ಯ (೧೦೨) ಇವರು ಹೃದಯಾಘಾತದಿಂದ ಸೋಮವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.
ಮೃತರು ಪ್ರಗತಿಪರ ಕೃಷಿಕರಾಗಿ, ತರಕಾರಿ ಮತ್ತು ಕಲ್ಲಂಗಡಿ ಕೃಷಿ ಜೊತೆಗೆ ಜಾನಪದ ಕ್ರೀಡೆ ಕಂಬಳ ಪ್ರೇಮಿಯಾಗಿ, ಪೊಳಲಿ ವಲಯ ಗಾಣಿಗ ಸಂಘದ ಹಿರಿಯ ಸದಸ್ಯರಾಗಿದ್ದರು. ಪೊಳಲಿ ಜಾತ್ರೆ ಹಿನ್ನೆಲೆಯಲ್ಲಿ ಆರಡ ಕರೆಯುವ ದಿನ ಸೋಮವಾರ ಬೆಳಿಗ್ಗೆ ಬೇಗನೆ ಎದ್ದು ದೇವಳಕ್ಕೆ ಬಂದು ದೇವರ ದರ್ಶನ ಪಡೆದು ಮನೆಗೆ ಬಂದು ಕಣ್ಣು ಮಂಜಾದ ಆಗಿದೆ ಎಂದು ಹೇಳಿ
ಮೃತರು ಪತ್ನಿ, ಪಾಣೆಮಂಗಳೂರು ಸುಮಂಗಲಾ ಕ್ರೆಡಿಟ್ ಸೊಸೈಟಿ ಮಾಜಿ ಅಧ್ಯಕ್ಷ ಎಸ್.ಎ ವಿಶ್ವನಾಥ್ ಬಿ.ಸಿ ರೋಡು ಸಹಿತ ಮೂವರು ಸುಪುತ್ರರು, ಏಳು ಸುಪುತ್ರಿಯರು ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಮನೆ ಸಮೀಪದ ಕಂಚೇಶ್ವರ ಗದ್ದೆಯಲ್ಲಿ ಸೋಮವಾರ ಸಂಜೆ ನೆರವೇರಿತು.
