ಮಂಗಳೂರು: ಮಂಗಳೂರು ಪ್ರೆಸ್ ಕ್ಲಬ್, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಪತ್ರಿಕಾ ಭವನ ಟ್ರಸ್ಟ್ ಆಶ್ರಯದಲ್ಲಿ ಪ್ರೆಸ್ ಕ್ಲಬ್ ದಿನಾಚರಣೆ, ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ- 2020 ಪ್ರದಾನ ಮತ್ತು ಹಿರಿಯ ಪತ್ರಕರ್ತರಿಗೆ ಪ್ರೆಸ್ ಕ್ಲಬ್ ಗೌರವ ಸನ್ಮಾನ ಕಾರ್ಯಕ್ರಮ ಮಾರ್ಚ್ 21ರಂದು ಭಾನುವಾರ ಪೂರ್ವಾಹ್ನ 11 ಗಂಟೆಗೆ ಬೊಕ್ಕಪಟ್ಣದ ರಾಣಿ ಅಬ್ಬಕ್ಕ ಕ್ರೂಸ್‍ನಲ್ಲಿ ಆಯೋಜಿಸಲಾಗಿದೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು ಅಧ್ಯಕ್ಷತೆ ವಹಿಸಲಿದ್ದಾರೆ. ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಕೆ.ಆನಂದ ಶೆಟ್ಟಿ ಉಪಸ್ಥಿತರಿರುವರು.

ನಿವೃತ್ತ ಶಿಕ್ಷಕ, ಶಾಲೆ- ಕಾಲೇಜುಗಳಿಗೆ ತೆರಳಿ ವಿದ್ಯಾರ್ಥಿ ವೇತನದ ಮಾಹಿತಿ ನೀಡುವ ಸಾಧಕ ಕಿನ್ನಜೆ ನಾರಾಯಣ ನಾಯಕ್ ಅವರಿಗೆ ಈ ಬಾರಿಯ ಪ್ರತಿಷ್ಠಿತ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಹಿರಿಯ ಪತ್ರಕರ್ತರಿಗೆ ಪ್ರೆಸ್ ಕ್ಲಬ್ ಗೌರವ ಸನ್ಮಾನ ಮತ್ತು ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ. ಸಭಾ ಕಾರ್ಯಕ್ರಮದ ಮೊದಲು ಪತ್ರಕರ್ತ ಮೈಮ್ ರಾಮ್‍ದಾಸ್ ಅವರಿಂದ ಗಾಯನ ಮತ್ತು ಬಳಿಕ ಮನೋರಂಜನಾ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಮುಹಮ್ಮದ್ ಆರಿಫ್ ಪಡುಬಿದ್ರಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *