Published On: Sun, Mar 21st, 2021

ಕುದ್ಕೋಳಿ: ಬಾಲಕಿಗೆ ಲೈಂಗಿಕ ಕಿರುಕುಳ, ಪೋಕ್ಸೋ ದಾಖಲು

ಬಂಟ್ವಾಳ:ಇಲ್ಲಿನ ಕುಕ್ಕಿಪಾಡಿ ಗ್ರಾಮದ ಕುದ್ಕೋಳಿ ಎಂಬಲ್ಲಿ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.download

ಇಲ್ಲಿನ ಕೂಲಿ ಕಾಮರ್ಿಕನಾಗಿರುವ ಆರೋಪಿ ಶೇಖರ ಗೌಡ ಎಂಬಾತನು ಕಳೆದ ೨ ತಿಂಗಳಿನಿಂದ ಅಪ್ರಾಪ್ತ ಬಾಲಕಿಗೆ ತಿಂಡಿ ನೀಡುವ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಮದು ಆರೋಪಿಸಲಾಗಿದೆ.

ಈ ಬಾಲಕಿಯ ಚಲನವಲನದಿಂದ ಅನುಮಾನಗೊಂಡ ಆಕೆಯ ಪೋಷಕರು ಕಳೆದ ಮೂರು ದಿನಗಳ ಹಿಂದೆಯಷ್ಟೇ ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗೆ ದೂರು ಸಲ್ಲಿಸಿದ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪುಂಜಾಲಕಟ್ಟೆ ಪೊಲೀಸ್ ಠಾಣೆ ಎಸೈ ಸೌಮ್ಯಾ ಜೆ. ತಿಳಿಸಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter