ಪುತ್ತೂರು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ಶ್ರೇಯ ಪಕ್ಕಳ ಅವರು ತೀರಿಕೊಂಡಿದ್ದಾರೆ. ಪುತ್ತೂರು ವಿವೇಕಾನಂದ ಕಾಲೇಜಿನ ವಿಜ್ಞಾನ ವಿಭಾಗದ ಪಿಯುಸಿ ಯ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದ ಆಕೆ, ಕೇವಲ 16 ವರ್ಷಗಳ ಎಳೆಯ ವಯಸ್ಸಿನಲ್ಲಿಯೇ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಆಕೆ ಪುತ್ತೂರು ತಾಲೂಕು ಬೆಳ್ಳಿಪ್ಪಾಡಿ ಯ ಪದ್ಮ ಪಕ್ಕಳ ಮತ್ತು ಉಮಾವತಿ ದಂಪತಿಯ ಎರಡನೇ ಪುತ್ರಿ.
ಸದಾ ಚಟುವಟಿಕೆಯಿಂದ ಇರುತ್ತಿದ್ದ ಆಕೆಯ ನಿನ್ನೆಯೂ ಲವಲವಿಕೆಯಿಂದಿದ್ದಳು. ಆದರೆ ಬೆಳಿಗ್ಗೆ ಸಣ್ಣಮಟ್ಟಿಗಿನ ಅನಾರೋಗ್ಯ ಕಾಣಿಸಿಕೊಂಡಿದೆ. ಆಗ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಆಕೆಯನ್ನು ದಾಖಲಿಸಲಾಗಿದೆ. ಆ ನಂತರ ವೈದ್ಯರ ಸಲಹೆಯ ಮೇರೆಗೆ ಆಕೆಯನ್ನು ಮಂಗಳೂರಿಗೆ ಶಿಫ್ಟ್ ಮಾಡಲು ಉದ್ದೇಶಿಸಲಾಗಿದೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದುಕೊಂಡು ಹೋಗುವ ದಾರಿ ಮಧ್ಯದಲ್ಲಿ ಆಕೆ ಅಸುನೀಗಿದ್ದಾರೆ.
