ಬಂಟ್ವಾಳ : ಕೊರೊನಾ ಜಾಗೃತಿ ಕಾರ್ಯಕ್ರಮ ಬಂಟ್ವಾಳ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಇಂದು ಮಂಗಳವಾರ ಹಮ್ಮಿಕೊಳ್ಳಲಾಗಿದ್ದು ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಪಂಚಾಯತ್  ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಕೊರೊನದ ಒಂದನೇ ಆಲೆ ಕಡಿಮೆಯಾಗಿ‌ ಎರಡನೇ‌ ಅಲೆ‌ ಪ್ರಾರಂಭವಾಗಿದ್ದು ಈಗಾಗಲೇ ರಚಿಸಿರುವ ಟಾಸ್ಕ್ ಫೋರ್ಸ್ ಸಮಿತಿಗಳು ಇನ್ನು ಮುಂದೆ ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕು ಎಂದರು.WhatsApp Image 2021-03-23 at 4.44.30 PM (1)

ಬಂಟ್ವಾಳ ತಾಲ್ಲೂಕು ಗಡಿ ಭಾಗದ ಪ್ರದೇಶಗಳನ್ನು ಒಳಗೊಂಡಿರುವುದರಿಂದ ಹೆಚ್ಚು ನಿಗಾ ವಹಿಸಬೇಕು. ಹೊರ ದೇಶಗಳಿಂದ ಬರುವ ಪ್ರಯಾಣಿಕರು ಇರುವ ಮನೆಗಳಿಗೆ ಆಶಾ ಕಾರ್ಯಕರ್ತೆಯರು ಭೇಟಿ ನೀಡಿ ಜಾಗೃತಿ ಮೂಡಿಸಬೇಕು ಎಂದರು.WhatsApp Image 2021-03-23 at 4.44.31 PM (1)

ಇದೇ ಸಂದರ್ಭದಲ್ಲಿ ತಾಲೂಕು ಕಚೇರಿ ಕೇಂದ್ರ ಸ್ಥಾನಿಯ ಶಿರಸ್ತೇದಾರ್ ಅಣ್ಣು ನಾಯ್ಕ್ ಮಾತನಾಡಿ 60 ವರ್ಷ‌ ಮೇಲ್ಪಟ್ಟವರು ಮತ್ತು 45 ವರ್ಷದಿಂದ 59 ವರ್ಷದೊಳಗಿನ ಇತರ ಕಾಯಿಲೆಯಿಂದ ಬಳಲುತ್ತಿರುವವರು ಭಯ ಪಡದೆ ಕೋವಿಡ್ ಲಸಿಕೆ ಪಡೆದು ಕೊಳ್ಳುವಂತೆ ಹೇಳಿದರು.WhatsApp Image 2021-03-23 at 4.44.31 PM

ಕೊರನಾದಿಂದ‌ ಲಾಕ್ ಡೌನ್ ಆಗದ ರೀತಿಯಲ್ಲಿ ಈಗಲೇ ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದರು. ಆಶಾ ಕಾರ್ಯಕರ್ತೆಯರು ಕಾರ್ಯಕ್ರಮ ದಲ್ಲಿ ಭಾಗವಹಿಸಿ ಕೊರೊನದ ಮುಂಜಾಗ್ರತೆಯ ಬಗ್ಗೆ ಮಾಹಿತಿ ನೀಡಿದರು. ಬಂಟ್ವಾಳ ಹೋಬಳಿ ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು. ತಾಲ್ಲೂಕು ಕಛೇರಿಯ ಸಿಬ್ಬಂದಿಗಳು, ಗ್ರಾಮ ಕರಣಿಕರು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ‌ ಕಾಟಿಪಳ್ಳ ಸ್ವಾಗತಿಸಿ ವಂದಿಸಿದರು.WhatsApp Image 2021-03-23 at 4.44.30 PM

By Suddi9

Leave a Reply

Your email address will not be published. Required fields are marked *