ಬಂಟ್ವಾಳ :ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ನೇತ್ರ ಪರಿವೀಕ್ಷಕ ಶ್ರೀಧರನ್ ಕೆ.ವಿ. (೫೯)ಅವರು ಮಾ.೨೬ರಂದು ಹೃದಯಾಘಾತದಿಂದ ಪುಂಜಾಲಕಟ್ಟೆ ಪ್ರಾ.ಆ.ಕೇಂದ್ರದಲ್ಲಿ ನಿಧನ ಹೊಂದಿದರು.ಮೃತರು ಪತ್ನಿ, ಪುತ್ರನನ್ನು ಅಗಲಿದ್ದಾರೆ. ಅವರು ಶುಕ್ರವಾರ ಮಧ್ಯಾಹ್ನ ಪಾರೆಂಕಿ ದೇವಸ್ಥಾನಕ್ಕೆ ತೆರಳಿದ್ದ ವೇಳೆ  ಅಲ್ಲಿ ಕುಸಿದು ಬಿದ್ದಿದ್ದರು. ತತ್‌ಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಅವರು ಕೊನೆಯುಸಿರೆಳೆದಿದ್ದರು.2603pktG1(Shridharan K.V.

ಅವರು ವಿಟ್ಲ, ಹಿರೆಗುತ್ತಿ, ಬೆಳ್ತಂಗಡಿ, ಪುಂಜಾಲಕಟ್ಟೆ ಮೊದಲಾದೆಡೆ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸಿದ್ದರು.  ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಅವರು ಮನೆಯಲ್ಲಿಯೂ ಬಡವರಿಗೆ ಉಚಿತವಾಗಿ ನೇತ್ರ ತಪಾಸಣೆ ನಡೆಸಿ ಕನ್ನಡಕ ನೀಡುತ್ತಿದ್ದರು. ಅಪಾರ ದೈವ ಭಕ್ತರಾಗಿದ್ದ ಅವರು ವಿವಿಧ ದೇವಸ್ಥಾನಗಳಿಗೆ ಕೊಡುಗೆ ನೀಡಿದ್ದರು. ಹವ್ಯಾಸಿ ನಾಟಕ ಕಲಾವಿದರಾಗಿದ್ದ ಅವರು ಯಕ್ಷಗಾನ ಪೋಷಕರಾಗಿದ್ದರು. ಕಾಲೇಜು ದಿನಗಳಲ್ಲಿ ಕ್ರೀಡಾಪಟುವಾಗಿದ್ದರು.

ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು, ಪುಂಜಾಲಕಟ್ಟೆ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ಸತೀಶ್ ಎಂ.ಸಿ., ಡಾ. ಸೋಹನ್ ಕುಮಾರ್, ಜಿ.ಪಂ.ಸದಸ್ಯರಾದ ಎಂ.ತುಂಗಪ್ಪ ಬಂಗೇರ, ಬಿ.ಪದ್ಮ ಶೇಖರ ಜೈನ್ ಮತ್ತಿತರರು ಮೃತರ ಅಂತಿಮ ದರ್ಶನ ಪಡೆದರು.

By Suddi9

Leave a Reply

Your email address will not be published. Required fields are marked *