ಮಂಗಳೂರು: ಪ.ಗೋ. ಪ್ರಶಸ್ತಿ ಪ್ರದಾನ ಸಮಾರಂಭ ಮಾ.30ರಂದು ಬೆಳಗ್ಗೆ 11:00 ಗಂಟೆಗೆ ಪತ್ರಿಕಾ ಭವನದಲ್ಲಿ ನಡೆಯಲಿದೆ. ಪ.ಗೋ.ಪ್ರಶಸ್ತಿಗೆ ಆಯ್ಕೆಯಾಗಿರುವ ಪತ್ರಕರ್ತ ಪ್ರದೀಶ್ .ಎಚ್ .ಮರೋಡಿ ಅವರಿಗೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಪ್ರಶಸ್ತಿ ಪ್ರದಾನ ಮಾಡಲಿರುವರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿರುವರು.
ಮುಖ್ಯ ಅತಿಥಿಗಳಾಗಿ ಮೇಯರ್ ಪ್ರೇಮಾನಂದ ಶೆಟ್ಟಿ, ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ,ಪಿಡಬ್ಲ್
ಮಹಾ ಸಭೆ : ಪ.ಗೋ.ಪ್ರಶಸ್ತಿ ಪ್ರದಾನ ಸಮಾರಂಭದ ಬಳಿಕ ಮಧ್ಯಾಹ್ನ 12:00 ಗಂಟೆಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ ನಡೆಯಲಿದೆ.
