ಬಂಟ್ವಾಳ: ಇಲ್ಲಿನ ಮೂಡುನಡುಗೋಡು ಗ್ರಾಮದ ಕರೆಂಕಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇದೇ ೫ರಂದು ಬೆಳಿಗ್ಗೆ ಗಂಟೆ ೧೧.೩೦ಕ್ಕೆ ಕೀಕಾಂಕೋಡು ಅರವತ್ ನೀಲೇಶ್ವರ ದಾಮೋದರ ತಂತ್ರಿ ಮಾರ್ಗದರ್ಶನದಲ್ಲಿ ದೇವರಿಗೆ ದೃಢಕಲಶ ನಡೆಯಲಿದೆ.ಅಂದು ಬೆಳಿಗ್ಗೆ ೯ ಗಂಟೆಗೆ ೧೦೮ ಕಾಯಿ ಗಣಯಾಗ ಮತ್ತು ಭಜನೆ, ಮಧ್ಯಾಹ್ನ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.
ಸಂಜೆ ೬ಗಂಟೆಗೆ ಧಾರ್ಮಿಕ ಸಭೆಯಲ್ಲಿ ಗುರುಪುರ ವಜ್ರದೇಹಿ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಮತ್ತಿತರ ಗಣ್ಯರು ಭಾಗವಹಿಸುವರು ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ, ವಕೀಲ ರಾಮಚಂದ್ರ ಶೆಟ್ಟಿ ದಂಡೆ ತಿಳಿಸಿದ್ದಾರೆ.
