ಬಂಟ್ವಾಳ : ತಾಲ್ಲೂಕು ಪಂಚಾಯಿತಿನಲ್ಲಿ ಸೋಮವಾರ ಏರ್ಪಡಿಸಿದ್ದ ಮಾಜಿ ಉಪಪ್ರಧಾನಿ ‘ಹಸಿರು ಕ್ರಾಂತಿ ಹರಿಕಾರ’ ಡಾ.ಬಾಬು ಜಗಜ್ಜೀವನ್ ರಾಮ್ ಇವರ ೧೧೪ನೇ ಜನ್ಮ ವರ್ಷಾಚರಣೆ ಕಾರ್ಯಕ್ರಮದಲ್ಲಿ ಸಾಹಿತಿ ಡಾ.ನಾಗವೇಣಿ ಮಂಚಿ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ವಿ.ಶೆಟ್ಟಿ, ತಹಶೀಲ್ದಾರ್ ರಶ್ಮಿ ಎಸ್.ಆರ್. ಮತ್ತಿತರರು ಇದ್ದರು.

