Published On: Fri, Apr 9th, 2021

ಕೋಲಾರದ ಡಿ.ದರ್ಶಿನಿ ಅವರಿಗೆ ಎಂಟೆಕ್‌ನಲ್ಲಿ ಪ್ರಥಮ ರ‍್ಯಾಂಕ್

ಕೋಲಾರ: ಮೈಸೂರಿನ ಜೆಎಸ್‌ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ೨೦೧೯-೨೦ನೇ ಸಾಲಿನ ೩ನೇ ಘಟಿಕೋತ್ಸವದಲ್ಲಿ ಎಂಟೆಕ್‌ನಲ್ಲಿ ಮೊದಲ ರ‍್ಯಾಂಕ್ ವಿಜೇತೆ ಡಿ.ದರ್ಶಿನಿ ಅವರಿಗೆ ಚಿನ್ನದ ಪದಕ ಪ್ರದಾನ ಮಾಡಲಾಗಿದೆ.10kolar8

ರ‍್ಯಾಂಕ್ ವಿಜೇತೆ ದರ್ಶಿನಿ ಅವರು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ವಿ.ದಯಾನಂದ್ ಹಾಗೂ ಎಪಿಎಂಸಿ ಸದಸ್ಯೆ ರೇಖಾ ದಂಪತಿಗಳ ಪುತ್ರಿಯಾಗಿದ್ದು, ಮೈಸೂರಿನ ಜೆಎಸ್‌ಎಸ್ ವಿಜ್ಞಾನ ತಂತ್ರಜ್ಞಾನ ವಿವಿಯಲ್ಲ ಎಂಟೆಕ್ ಅಂತಿಮ ಪದವಿ ಪರಿಸರ ವಿಜ್ಞಾನ ಎಂಜಿನಿಯರಿಂಗ್ ವಿಷಯದಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಇಡೀ ವಿವಿಗೆ ಅತಿ ಹೆಚ್ಚು ಅಂಕ ಗಳಿಸುವ ಮೂಲಕ ಚಿನ್ನದ ಪದಕ ಗಳಿಸಿಕೊಂಡಿದ್ದಾರೆ. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮಾನ್ಯತಾ ಮಂಡಳಿ ಅಧ್ಯಕ್ಷ ಪ್ರೊ.ಕೆ.ಕೆ.ಅಗರವಾಲ್, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ವಿಶ್ವವಿದ್ಯಾಲಯದ ಉಪ ಕುಲಪತಿ ಸಿದ್ದರಾಮಯ್ಯ ಮತ್ತಿತರ ಗಣ್ಯರು ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ಚಿನ್ನದ ಪದಕ ಪ್ರದಾನ ಮಾಡಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter