Published On: Mon, Apr 12th, 2021

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಎ.೧೮ ರಂದು ಭಾನುವಾರ ಸಾಮೂಹಿಕ ವಿವಾಹ ನಿಶ್ಚಿತಾರ್ಥ

ಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ ೩೭ನೇ ವರ್ಷಾಚರಣೆ ಪ್ರಯುಕ್ತ  ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಎ.೨೫ರಂದು ನಡೆಯಲಿರುವ ೧೩ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ಪ್ರಯುಕ್ತ ವಧು-ವರರ ನಿಶ್ಚಿತಾರ್ಥ ಕಾರ್ಯಕ್ರಮ ಎ.೧೮ರಂದು ಪುಂಜಾಲಕಟ್ಟೆ ಪಿಲಾತಬೆಟ್ಟು ವ್ಯ.ಸೇ.ಸಂಘದ ಸುವಿಧಾ ಸಭಾಂಗಣದಲ್ಲಿ ಜರಗಲಿದೆ.13. Swasthik Friends New Logo

ಈ ಬಾರಿ ಒಟ್ಟು ೧೬ ಜೋಡಿಗಳಿಗೆ ವಿವಾಹ ನಡೆಯಲಿದ್ದು,  ತುಳುನಾಡಿನ ಸಂಪ್ರದಾಯ ಪ್ರಕಾರ ನಿಶ್ಚಿತಾರ್ಥ ನಡೆಯಲಿದೆ. ಈ ಸಂದರ್ಭದಲ್ಲಿ ಭಾವೀ ವಧು-ವರರಿಗೆ ಮಂಗಳವಸ್ತ್ರವನ್ನು ವಿತರಿಸಲಾಗುವುದು.ಬೆಳ್ತಂಗಡಿ ಬಿಜೆಪಿ ಅಧ್ಯಕ್ಷ ಜಯಂತ ಕೋಟ್ಯಾನ್ ಅವರು ವಿತರಣ ಕಾರ್ಯಕ್ರಮದ  ಅಧ್ಯಕ್ಷತೆ ವಹಿಸುವರು. ರಾಜ್ಯ ನಗರ ನೀರು ಸರಬರಾಜು   ಒಳಚರಂಡಿ  ಮಂಡಳಿ ನಿರ್ದೇಶಕಿ ಸುಲೋಚನಾ ಜಿ.ಕೆ.ಭಟ್, ಶಿಶು ಅಭಿವೃದ್ಧಿ ಅಽಕಾರಿ ಗಾಯತ್ರಿ ಕಂಬಳಿ,  ತುಳು ಸಾಹಿತ್ಯ ಅಕಾಡೆಮಿ ಸದಸ್ಯೆ ಮಲ್ಲಿಕಾ ಶೆಟ್ಟಿ,ಇರ್ವತ್ತೂರು ಗ್ರಾ.ಪಂ.ಅಧ್ಯಕ್ಷ ಎಂ.ಪಿ. ಶೇಖರ್,ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಮೊದಲಾದವರು ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ಕ್ಲಬ್ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಮತ್ತು ಅಧ್ಯಕ್ಷ ಪ್ರಶಾಂತ ಪುಂಜಾಲಕಟ್ಟೆ ಅವರು  ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter