Published On: Wed, Apr 14th, 2021

ವಿಠಲ ಪ್ರೌಢಶಾಲೆಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ 130ನೇ ಜನ್ಮ ದಿನಾಚರಣೆ

ವಿಟ್ಲ : ವಿಠಲ ಪ್ರೌಢಶಾಲೆಯ ವಿಟ್ಲ ಇಲ್ಲಿ .ಡಾ ಬಿ.ಆರ್ ಅಂಬೇಡ್ಕರ್ ಅವರ 13೦ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ  ಸಂಸ್ಥೆಯ ಹಿರಿಯ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ನಿಲಯದ ಮೇಲ್ವಿಚಾರಕಿ  ಶ್ರೀಮತಿ ಭವಾನಿ ಇವರು ಭಾಗವಹಿಸಿದರು.ಇವರು ಅಂಬೇಡ್ಕರ್ ಅವರ ಜೀವನ ಹಾಗೂ ಸಾಧನೆಯ ಕುರಿತು ಮಾತನಾಡಿದರು.SHV_9762 (1)ಅತಿಥಿಯಾಗಿ ಭಾಗವಹಿಸಿದ ಹಿರಿಯ ವಿದ್ಯಾರ್ಥಿ ಶ್ರೀ ಭರತ್ ಅಂಬೇಡ್ಕರ್ ಅವರ ಸಮಾನತೆಯ ತತ್ವ ಹಾಗೂ ಶಿಕ್ಷಣದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಠಲ ವಿದ್ಯಾ ಸಂಘದ ಕೋಶಾಧಿಕಾರಿ ಶ್ರೀಯುತ ಬಾಬು ಕೊಪ್ಪಳ ವಹಿಸಿದ್ದರು ಇದೇ ಸಂದರ್ಭದಲ್ಲಿ ರಾಜ್ಯಮಟ್ಟದ ಕಲಾಶ್ರೀ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕುಮಾರಿ ನಂದಿತ ಇವರನ್ನು ಸನ್ಮಾನಿಸಲಾಯಿತು.

ಕಳೆದ SSLC ಪರೀಕ್ಷೆಯಲ್ಲಿ ಕನ್ನಡದಲ್ಲಿ 125  ಅಂಕ ಗಳಿಸಿದ ಇವಳಿಗೆ ಸಂಸ್ಥೆಯ ಕನ್ನಡ ಶಿಕ್ಷಕಿ ಗೀತಾ ಇವರು ರೂ1000 ನಗದು ಬಹುಮಾನ ನೀಡಿ ಪ್ರೋತ್ಸಾಹಿಸಿದರು. ಉಪಪ್ರಾಂಶುಪಾಲರಾದ ಶ್ರೀಯುತ ಕಿರಣ್ ಕುಮಾರ್ ಸ್ವಾಗತಿಸಿದರು. ಶಿಕ್ಷಕಿ ಶ್ರೀಮತಿ ಆಶಾ ಮೇಡಂ ಧನ್ಯವಾದ ನೀಡಿದರು ಕಾರ್ಯಕ್ರಮದ ನಿರೂಪಣೆಯನ್ನು ಶ್ರೀ ರಾಜಶೇಖರ್ ನಿರ್ವಹಿಸಿದರು. ಈ ಕಾರ್ಯಕ್ರಮದಲ್ಲಿ ಎಲ್ಲಾ ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter