Published On: Mon, Apr 19th, 2021

ಕಬಡ್ಡಿ ಪಂದ್ಯಾಟ ಹಿಂದುತ್ವ ಎಂದರೆ ರಾಷ್ಟ್ರಪ್ರೇಮದ ಸಂಕೇತ: ಅಡ್ಯಂತಾಯ

ಬಂಟ್ವಾಳ : ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡು ಸಮೀಪದ ಗಾಣದಪಡ್ಪು ಮೈದಾನದಲ್ಲಿ ಹಿಂದೂ ಜಾಗರಣ ವೇದಿಕೆ ಮತ್ತು ಹಿಂದೂ ಯುವವಾಹಿನಿ ವತಿಯಿಂದ 17 ರಂದು ಶನಿವಾರ ರಾತ್ರಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾಟವನ್ನು ರಾಧಾಕೃಷ್ಣ ಅಡ್ಯಂತಾಯ ಮತ್ತು ಕಿಶೋರ್ ಕುಮಾರ್ ಉದ್ಘಾಟಿಸಿದರು. ಬಿ.ಸಿ.ರೋಡು ಜಿಲ್ಲಾ ಮಟ್ಟದ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾಟ ಹಿಂದುತ್ವ ಎಂದರೆ ರಾಷ್ಟ್ರಪ್ರೇಮದ ಸಂಕೇತ ಎಂದು ಅಡ್ಯಂತಾಯ ತಿಳಿಸಿದರು. ಬಹು ಭಾಷೆ ಮತ್ತು ವಿವಿಧ ಧರ್ಮಗಳಿಂದ ಕೂಡಿದ ಈ ದೇಶದಲ್ಲಿ ಹಿಂದುತ್ವ ಎಂದರೆ ನೈಜ ರಾಷ್ಟ್ರಪ್ರೇಮದ ಸಂಕೇತವಾಗಿದೆ. ಆದರೆ ಲವ್ ಜಿಹಾದ್, ಮತಾಂತರ ಮತ್ತು ಗೋಹತ್ಯೆ ಮತ್ತಿತರ ರಾಷ್ಟ್ರವಿರೋಧಿ ಚಟುವಟಿಕೆಗಳನ್ನು ಎಂದಿಗೂ ಸಹಿಸಿಕೊಳ್ಳುವುದಿಲ್ಲ ಎಂದು ಹಿಂದೂ ಜಾಗರಣ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಅಡ್ಯಂತಾಯ ಹೇಳಿದ್ದಾರೆ.18btl-Kabaddi
ಇಲ್ಲಿನ ಬಿ.ಸಿ.ರೋಡು ಸಮೀಪದ ಗಾಣದಪಡ್ಪು ಮೈದಾನದಲ್ಲಿ ಹಿಂದೂ ಜಾಗರಣ ವೇದಿಕೆ ಮತ್ತು ಹಿಂದೂ ಯುವವಾಹಿನಿ ವತಿಯಿಂದ ಶನಿವಾರ ರಾತ್ರಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾಟ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು. ಆರ್ ಎಸ್ ಎಸ್ ಪುತ್ತೂರು ಜಿಲ್ಲೆ ಸಂಘ ಚಾಲಕ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ರೀಡೆಯಿಂದ ಸದೃಢ ಮತ್ತು ಆರೋಗ್ಯವಂತ ಸಮಾಜ ನಿರ್ಮಾಣವಾಗುತ್ತದೆ ಎಂದರು.

ಜಾಗರಣ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಕಿಶೋರ್ ಕುಮಾರ್ ಸಭಾ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಉದ್ಯಮಿ ಭುವನೇಶ ಪಚ್ಚಿನಡ್ಕ, ನಾಗೇಶ ಕಲ್ಲಡ್ಕ, ತಾರನಾಥ ಕೊಟ್ಟಾರಿ, ಉಮೇಶ ಸಾಲ್ಯಾನ್ ಬೆಂಜನಪದವು, ಪ್ರಮುಖರಾದ ರವಿರಾಜ್ ಬಿ.ಸಿ.ರೋಡು, ರತ್ನಾಕರ ಶೆಟ್ಟಿ ಕಲ್ಲಡ್ಕ, ಜಗದೀಶ ನೆತ್ರಕೆರೆ, ನರಸಿಂಹ ಶೆಟ್ಟಿ ಮಾಣಿ, ಅಜಿತ್ ಹೊಸಮನೆ, ಕಬಡ್ಡಿ ಕ್ರೀಡಾಪಟು ಪುರುಷೋತ್ತಮ ಗಟ್ಟಿ ತುಂಬೆ, ಯುವವಾಹಿನಿ ಸಂಚಾಲಕ ಪ್ರಶಾಂತ ಕೆಂಪುಗುಡ್ಡೆ ಮತ್ತಿತರರು ಶುಭ ಹಾರೈಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದ್ರೆ, ಜಿಲ್ಲಾ ಕಾರ್ಯದರ್ಶಿ ರಾಮದಾಸ ಬಂಟ್ವಾಳ್, ಕ್ಷೇತ್ರ ಬಿಜೆಪಿ ಕಾರ್ಯದರ್ಶಿ ಡೊಂಬಯ ಬಿ.ಅರಳ, ಜಿಲ್ಲಾ ಪಂಚಾಯಿತಿ ಸದಸ್ಯ ರವೀಂದ್ರ ಕಂಬಳಿ, ತಾಲ್ಲೂಕು ಪಂಚಾಯಿತಿ ಸದಸ್ಯ ಗಣೇಶ ಸುವರ್ಣ ಮತ್ತಿತರರು ಭೇಟಿ ನೀಡಿದರು. ಜಾಗರಣ ವೇದಿಕೆ ತಾಲ್ಲೂಕು ಘಟಕ ಅಧ್ಯಕ್ಷ ತಿರುಲೇಶ್ ಬೆಳ್ಳೂರು ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಸಚಿನ್ ಬಿ.ಸಿ.ರೋಡು ವಂದಿಸಿದರು. ಸುರೇಶ ನಾವೂರು ಕಾರ್ಯಕ್ರಮ ನಿರೂಪಿಸಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter