ಸುದ್ದಿ9ಬಂಟ್ವಾಳ:ಕನರ್ಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮತ್ತು ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯು ಪಕ್ಷದ ಸದಸ್ಯತ್ವ ನೋಂದಣಿ ಹಾಗೂ ಪಕ್ಷದ ಸಂಘಟನೆಗಾಗಿ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲು ಕರೆ ನೀಡಿರುವ ಹಿನ್ನಲೆಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ದಿ. 28.10.2014ನೇ ಮಂಗಳವಾರ ಬೆಳಿಗ್ಗೆ ಗಂಟೆ 9.00ರಿಂದ ಅಪರಾಹ್ನ ಗಂಟೆ 6.00 ರ ತನಕ ಕಾಂಗ್ರೆಸ್ ಪಕ್ಷದ ಸದಸ್ಯತ್ವ ಅಭಿಯಾನವು ಬ್ಲಾಕ್ ವ್ಯಾಪ್ತಿಯಲ್ಲಿ ನಡೆಯಲಿದೆ.

congress
ಎಲ್ಲಾ ಬೂತ್ ಕಮಿಟಿಗಳಲ್ಲಿ ಪಕ್ಷದ ವಿಶೇಷ ಸಭೆಗಳನ್ನು ನಡೆಸುವುದಲ್ಲದೆ ಪ್ರತಿಯೊಂದು ಬೂತಿನಲ್ಲಿ ಕನಿಷ್ಠ 30 ಮಂದಿ ಸದಸ್ಯರನ್ನು ನೋಂದಾಯಿಸಿ ಕೊಳ್ಳಲು ತಿಮರ್ಾನಿಸಲಾಗಿದೆ. ಅಭಿಯಾನದ ದಿನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ರಮಾನಾಥ ರೈಯವರು ಬೂತ್ಗಳಿಗೆ ಭೇಟಿ ನೀಡಲಿದ್ದಾರೆ. ಆದುದರಿಂದ ಅಭಿಯಾನದಲ್ಲಿ ಪಕ್ಷದ ಕಾರ್ಯಕರ್ತರು,ವಿವಿಧ ಹಂತದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ನಾಯಕರು ಭಾಗವಹಿಸಿ ಯಶಸ್ವಿಗೊಳಿಸುವಂcongressತೆ ವಿನಂತಿಸುತ್ತೇವೆ.

By Suddi9

Leave a Reply

Your email address will not be published. Required fields are marked *