ಸಂಘದ ಸದಸ್ಯರು ಕೋವಿಡ್ ಹರಡುವಿಕೆ ತಡೆಯಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಚೇರಿ ಎದುರು ಧರಣಿ
ಶ್ರೀನಿವಾಸಪುರ: ಕರ್ನಾಟಕ ಪ್ರಾಂತ ರೈತ ಸಂಘದ ಸದಸ್ಯರು ಕೋವಿಡ್ ಹರಡುವಿಕೆಯನ್ನು ತಡೆಯಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಸಿ ತಾಲ್ಲೂಕು ಕಚೇರಿ ಎದುರು ಧರಣಿ ನಡೆಸಿದರು. ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಧರಣಿ ನಿರತರನ್ನು ಉದ್ದೇಶಿಸಿ ಮಾತನಾಡಿ, ಸರ್ಕಾರ ಕೋವಿಡ್ ಪೀಡಿತರಿಗೆ ಉಚಿತ ಚಿಕಿತ್ಸೆ ನೀಡಬೇಕು. ಖಾಸಗಿ ಆಸ್ಪತ್ರೆಗಳನ್ನು ತಾತ್ಕಾಲಿಕವಾಗಿ ಸರ್ಕಾರದ ವಶಕ್ಕೆ ಪಡೆದುಕೊಳ್ಳಬೇಕು. ಆದಾಯ ತೆರಿಗೆ ವ್ಯಾಪ್ತಿಗೆ ಬರದ ಕುಟುಂಬಗಳಿಗೆ ಮಾಸಿಕ ತಮ್ಮ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಶಿರಸ್ತೇದಾರ್‌ಗೆ ನೀಡಲಾಯಿತು. ಮುಖಂಡರಾದ ಎನ್.ವೀರಪ್ಪರೆಡ್ಡಿ, ಕೆ.ಎನ್.ರಾಮಪ್ಪ, ಎಚ್.ವಿ.ನಾರಾಯಣ ಸ್ವಾಮಿ, ಟಿ.ಎಚ್.ಆಂಜಲಪ್ಪ, ಎಲ್.ವಿ.ರಮೇಶ್, ಎನ್.ನಾಗಭೂಷಣ್ ಇದ್ದರು.ಪಟ್ಟಣದ ಅಂಗಡಿಗಳ ಮೇಲೆ ಪುರಸಭೆ ಅಧಿಕಾರಿಗಳು ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಸೋಮವಾರ ಬೆಳಿಗ್ಗೆ ಪುರಸಭೆ ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ಅನಿರೀಕ್ಷಿತ ದಾಳಿ ನಡೆಸಿ ಎಂಜಿ ರಸ್ತೆ ಸೇರಿದಂತೆ ಸೇರಿದಂತೆ ಪಟ್ಟಣದ ಹಲವು ಅಂಗಡಿಗಳನ್ನು ಜಾಲಾಡಿ ಕಾನೂನು ಬಾಹಿರ ಗಾತ್ರದ ಪ್ಲಾಸ್ಟಿಕ್ ಕವರ್, ಮಾರಾಟಕ್ಕೆ ಇಟ್ಟಿದ್ದ ಪ್ಲಾಸ್ಟಿಕ್ ಲೋಟ, ಚಮಚ, ಚಿತ್ರಪಟಗಳು ಸೇರಿದಂತೆ ಹಲವು ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡು ರೂ.೫ ಸಾವಿರ ದಂಡ ವಿಧಿಸಿದರು. ಪುರಸಭೆ ಮುಖ್ಯಾಧಿಕಾರಿ ಡಿ.ಶೇಖರರೆಡ್ಡಿ, ಪುರಸಭೆಯ ಆರೋಗ್ಯ ನಿರೀಕ್ಷಕ ಎಂ.ಪೃಥ್ವಿರಾಜ್ ಪುರಸಭೆ ಕಂದಾಯ ನಿರೀಕ್ಷಕ ಶಂಕರ್ ಹಾಗೂ ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದರು.