Published On: Fri, May 7th, 2021

ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕರಿಂದ ಪರಿಶೀಲನೆ

ಮೂಡುಬಿದಿರೆ : ಸಮುದಾಯ ಆರೋಗ್ಯ ಕೇಂದ್ರಕ್ಕೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಗುರುವಾರ ಭೇಟಿ ನೀಡಿ ಕೊರೋನಾ ಹರಡದಂತೆ ಕೈಗೊಂಡಿರುವ ಮುಂಜಾಗ್ರತ ಕ್ರಮಗಳು ಹಾಗೂ ತುರ್ತು ಸಂದರ್ಭದಲ್ಲಿ ಆಸ್ಪತ್ರೆಯಲ್ಲಿರುವ ಸೌಲಭ್ಯಗಳ ಕುರಿತು ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿಯನ್ನು ಪಡೆದುಕೊಂಡರು.wpid-img-20210506-wa02525491558395894520781

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಕೋವಿಡ್ 125 ಪಾಸಿಟಿವ್ ಕೇಸ್ ಇದೆ ಅದರಲ್ಲಿ 17 ಜನ ಅಡ್ಮಿಟ್ ಆಗಿದ್ದಾರೆ. ಉಳಿದವರು ಹೋಂ ಐಸೋಲೇಷನಲ್ಲಿದ್ದಾರೆ. ಈಗಾಗಲೇ ಆಸ್ಪತ್ರೆಯಲ್ಲಿ ವ್ಯಾಕ್ಸಿನ್ ನೀಡಲಾಗುತ್ತಿದೆ. ಇಲ್ಲಿ ಆಕ್ಸಿಜನ್, ವಾಹನ, ಸಿಬಂದಿಗಳ ಕೊರತೆ ಇಲ್ಲ. ಹೊಸದಾಗಿ 6 ಜನರಿಗೆ ಅಡ್ಮಿಟ್ ಮಾಡಲು ಅವರಿಗೆ ಬೇಕಾದ ಸೌಕರ್ಯಗಳನ್ನು ಮಾಡಿಕೊಡಲಾಗುವುದು. ಒಂದೆರಡು ದಿನಗಳಲ್ಲಿ ಹೆಚ್ಚಿನ ಕೇಸ್‍ಗಳು ಬಂದರೆ ಪುರಸಭೆ, ಕನ್ನಡ ಭವನ, ಆಳ್ವಾಸ್ ಹೆಲ್ತ್ ಸೆಂಟರ್ ಮತ್ತು ಶಾಸಕರ ವಾರ್‍ರೂಮ್‍ನಲ್ಲಿ ಅವಕಾಶ ಮಾಡಿಕೊಡಲಾಗುವುದು. ಮುಂಜಾಗ್ರತ ಕ್ರಮವಾಗಿ ಕನ್ನಡ ಭವನದಲ್ಲಿ 50 ಬೆಡ್‍ಗಳನ್ನು ಹಾಕುತ್ತೇವೆ. ಮುಂದಿನ ದಿಗಳಲ್ಲಿ ವ್ಯವಸ್ಥಿತವಾಗಿ ಕೆಲಸ ಕಾರ್ಯಗಳು ನಡೆಯುತ್ತವೆ ಎಂದರು.
ಪುರಸಭಾ ಸದಸ್ಯ ರಾಜೇಶ್ ನಾಯ್ಕ್, ಮೂಡಾ ಅಧ್ಯಕ್ಷ ಮೇಘನಾಥ ಶೆಟ್ಟಿ, ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಶಶಿಕಲಾ ಹಾಗೂ ಹಿರಿಯ ಆರೋಗ್ಯ ಸಹಾಯಕಿಯರು ಈ ಸಂದರ್ಭದಲ್ಲಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter