ಮಂಗಳೂರು:ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾದ ಸಸಿಹಿತ್ಲು ಬೀಚ್ ನ ಪ್ರದೇಶಗಳಿಗೆ ಸನ್ಮಾನ್ಯ ಕಂದಾಯ ಸಚಿವರಾದ ಶ್ರೀ ಆರ್.ಅಶೋಕ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು ಕಾಳಜಿ ಕೇಂದ್ರದಲ್ಲಿರುವ 182 ಕುಟುಂಬಗಳಿಗೆ ತಲಾ 10 ಸಾವಿರ ರೂ ನೀಡಲಾಗಿದ್ದು, ಭಾಗಶಃ ಹಾನಿಯಾದ ಮನೆಗಳಿಗೆ 5 ಲಕ್ಷ ರೂ ಹಾಗೂ ಪೂರ್ತಿ ಹಾನಿಯಾದ ಮನೆಗಳಿಗೆ 10 ಲಕ್ಷ ರೂ ಪರಿಹಾರ ನೀಡಲಾಗುವುದು ಎಂದು ಘೋಷಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಮಾನ್ಯ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್, ಮೂಲ್ಕಿ ಮೂಡುಬಿದಿರೆ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್, ಸ್ಥಳೀಯ ಜನಪ್ರತಿನಿದಿಗಳು, ಪಕ್ಷದ ಮುಖಂಡರುಗಳು, ಸ್ಥಳೀಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
