ಬಂಟ್ವಾಳ: ಅಪಘಾತದಲ್ಲಿ ಗಂಭೀರ ಗಾಯಗೊಂಡು ಕಳೆದ ಎರಡು ತಿಂಗಳಿನಿಂದ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಬಂಟ್ವಾಳ ಬಿ.ಕಸ್ಬಾ ಗ್ರಾಮದ ಮುಗ್ಡಾಲ್ ಗುಡ್ಡೆ ನಿವಾಸಿ ವಿನಯ್ (24)ಮೃತಪಟ್ಟ ಯುವಕ.ಮಾ.10 ರಂದು ಪಾಣೆಮಂಗಳೂರು ಅಕ್ಕರಂಗಡಿ ಎಂಬಲ್ಲಿ ಪಿಕಪ್ ಜೀಪ್ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ವಿನಯ್ ಅವರ ತಲೆಗೆ ಗಾಯವಾಗಿದ್ದು ಅವರು ಕೋಮಾ ಅವಸ್ಥೆಯಿಂದ ತೀವ್ರ ನಿಗಾ ಘಟಕ ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಕಳೆದ ಎರಡು ತಿಂಗಳಿನಿಂದ ತೀವ್ರ ನಿಗಾ ಘಟಕ ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿನಯ್ ಅವರು ಚಿಕಿತ್ಸೆ ಗೆ ಸ್ಪಂದಿಸಿದೆ ಇಂದು ಕೊನೆಯುಸಿರೆಳೆದಿದ್ದಾನೆ.

By Suddi9

Leave a Reply

Your email address will not be published. Required fields are marked *