ಕಡ್ತಲ : ಕಡ್ತಲ ಗ್ರಾ.ಪಂ ವತಿಯಿಂದ ಆಶಾಕಾರ್ಯಕರ್ತೆಯರಿಗೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಪಂಚಾಯತ್ ಅಧ್ಯಕ್ಷರಾದ ಮಾಲತಿ ದಿನೇಶ್ ಕುಲಾಲ್ ಅವರು ಮಾಸ್ಕ್ ಹಾಗೂ ಸ್ಯಾನಿಟೈಜರ್ ವಿತರಿಸಿದರು.
ಈ ಸಂಧರ್ಭದಲ್ಲಿ ಪ್ರಾಥಮಿಕ ಅರೋಗ್ಯ ಕೇಂದ್ರ ದೊಂಡೇರಂಗಡಿಯ ವೈದ್ಯಾಧಿಕಾರಿಗಳಾದ ಡಾ.ಚಂದ್ರಿಕಾ ಕಿಣಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
