ಕೈಕಂಬ : ಕಳೆದ ವಾರ ನಿವೃತ್ತರಾದ ಗಂಜಿಮಠ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ(ಪಿಡಿಒ) ಹಸನಬ್ಬ ಅವರಿಗೆ ಸೋಮವಾರ ಪಂಚಾಯತ್ ಕಚೇರಿಯಲ್ಲಿ ಸನ್ಮಾನ ಏರ್ಪಡಿಸಲಾಯಿತು.
ಕಾರ್ಯಕ್ರಮದಲ್ಲಿ ಪಂಚಾಯತ್ ಉಪಾಧ್ಯಕ್ಷೆ ಕುಮುದಾ ನಾೈಕ್, ಜಿಪಂ ಮಾಜಿ ಸದಸ್ಯ ಯು ಪಿ ಇಬ್ರಾಹಿಂ, ಉಪತಹಶೀಲ್ದಾರ್ ಶಿವಪ್ರಸಾದ್, ಕಂದಾಯ ನಿರೀಕ್ಷಕ ನವನೀತ ಮಾಳವ, ಗಂಜಿಮಠ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಮಿತ್ ರಾಜ್, ಕಂದಾವರ ಗ್ರಾಮ ಕರಣಿಕ, ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
