ಬಂಟ್ವಾಳ: ಕುಕ್ಕಿಪಾಡಿ ಗ್ರಾಮದ ಕೆಂತಲೆ ನಿವಾಸಿ ನೇಮು ಪೂಜಾರಿ(71 ಅವರು ) ಜೂ.1ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.ಮೃತರು ಪತ್ನಿ, ಪುತ್ರ, ಮುಂಬಯಿ ಉದ್ಯಮಿ ನಿತ್ಯಾನಂದ ಪೂಜಾರಿ ಕೆಂತಲೆ ಸಹಿತ ಐವರು ಪುತ್ರರು ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.

d95b52e8-29e0-4bcf-a0cc-10603d88bf90
ಪ್ರಗತಿಪರ ಕೃಷಿಕರಾಗಿದ್ದ ಅವರು ಸಿದ್ದಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷರಾಗಿದ್ದರು. ಮಾವಿನಕಟ್ಟೆ ಸಾರ್ವಜನಿಕ ಯಕ್ಷಗಾನ ಬಯಲಾಟ ಸೇವಾ ಸಮಿತಿ ಅಧ್ಯಕ್ಷ, ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಸಾಮಾಜಿಕ ಕಾರ್ಯಕರ್ತರಾಗಿದ್ದ ಅವರು ವಿವಿಧ ದೈವ, ದೇವಸ್ಥಾನಗಳಿಗೆ ಕೊಡುಗೆ ನೀಡಿದ್ದರು.

By suddi9

Leave a Reply

Your email address will not be published. Required fields are marked *