ಬಂಟ್ವಾಳ:ತಾಲ್ಲೂಕಿನ ತುಂಬೆ ನೇತ್ರಾವತಿ ನದಿ ಅಣೆಕಟ್ಟೆ ಬಳಿ ಅಪರಿಚಿತ ವ್ಯಕ್ತಿಯೊಬ್ಬರ ಮೃತ ದೇಹ ಪತ್ತೆಯಾದ ಘಟನೆ ಗುರುವಾರ ನಡೆದಿದೆ.
ಇಲ್ಲಿನ ಹಳೆ ಮತ್ತು ಹೊಸ ಅಣೆಕಟ್ಟೆ ಮಧ್ಯೆ ಸಿಲುಕಿಕೊಂಡಿದ್ದ ಮೃತದೇಹವು ಕಳೆದ ಎರಡು ದಿನಗಳ ಹಿಂದೆ ನೀರಿಗೆ ಬಿದ್ದಿರಬಹುದು ಎಂದು ಪೊಲೀಸರು ಶಂಕೆ ವ್ಯಕಿತಪಡಿಸಿದ್ದಾರೆ.
ಮೃತದೇಹದ ಹೆಗಲಿನಲ್ಲಿ ಚೀಲವೊಂದು ಪತ್ತೆಯಾಗಿದ್ದು, ಶರೀರವು ಊದಿಕೊಂಡಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಮೃತದೇಹ ಪತ್ತೆಯಾದ ಸ್ಥಳ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಗೆ ಸೇರಿದ ಹಿನ್ನೆಲೆಯಲ್ಲಿ ಮೃತದೇಹ ಹೊರತೆಗೆದು ಸ್ಥಳಪರಿಶೀಲನೆ ನಡೆಸಿದ್ದಾರೆ.
