ಬಂಟ್ವಾಳ:ತಾಲ್ಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯ ಪುತ್ತಿಲ ಗ್ರಾಮದ ಕಲ್ಲೇರಿ ಎಂಬಲ್ಲಿ ಮನೆಯೊಂದಕ್ಕೆ ನುಗ್ಗಿದ ಕಳ್ಳರು ನಗದು ಮತ್ತು ಅಡುಗೆ ಅನಿಲ ಸಿಲಿಂಡರ್ ಎಗರಿಸಿ ಪರಾರಿಯಾಗಿರುವ ಘಟನೆ ಶುಕ್ರವಾರ ನಡೆದಿದೆ.
ಇಲ್ಲಿನ ನಿವಾಸಿ ಇಬ್ರಾಹಿಂ ಎಂಬವರು ತನ್ನ ಪತ್ನಿ ಹೆರಿಗೆ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ಮಂಗಳೂರಿಗೆ ತೆರಳಿದ್ದರು ಎನ್ನಲಾಗಿದೆ. ಇದರಿಂದಾಗಿ ಶುಕ್ರವಾರ ಮುಂಜಾನೆ ಹಿಂಬಾಗಿಲಿನ ಚಿಲಕ ಮುರಿದು ಒಳ ಪ್ರವೇಶಿಸಿದ್ದ ಕಳ್ಳರು ಮನೆಯೊಳಗಿನಿಂದ ಎರಡು ಅಡುಗೆ ಅನಿಲ ಜಾಡಿ ಮತ್ತು ರೂ 4 ಸಾವಿರ ಮೊತ್ತದ ನಗದು ಎಗರಿಸಿ ಪರಾರಿಯಾಗಿದ್ದಾರೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ವಿವರಿಸಿದ್ದಾರೆ.
–
